May 3, 2024

MALNAD TV

HEART OF COFFEE CITY

ಔಷಧಿಕೊರತೆ ತನಿಖೆಗೆ ಸಚಿವರ ಸೂಚನೆ

1 min read

ಚಿಕ್ಕಮಗಳೂರು: ಗೋಣಿಬೀಡಿನಲ್ಲಿ ಹಾವು ಕಡಿತಕ್ಕೊಳಗಾಗಿದ್ದ ವ್ಯಕ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಾಗ, ಆಸ್ಪತ್ರೆಯಲ್ಲಿ ಔಷಧಿ ಇದ್ದರೂ ನೀಡದೇ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಜಿಲ್ಲಾ ಆರೋಗ್ಯಾಧಿಕಾರಿಗೆ ಆದೇಶಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಚಿಕಿತ್ಸೆಗೆ ಅಲೆದಾಡಿಸಿರುವುದು ಸರಿಯಲ್ಲವೆಂದು ಹೇಳಿದರು.

ರಾಷ್ಟ್ರಕ್ಕೆ ಜಿಲ್ಲೆ ಪ್ರಥಮ:

ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ ನೀಡಿಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಷ್ಟ್ರದಲ್ಲೇ ಅತ್ಯುನ್ನತ ಸಾಧನೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಜಿಲ್ಲೆಯಾದ್ಯಂತ ಸಮುದಾಯ ಆಧಾರಿತ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರವನ್ನು ಏರ್ಪಡಿಸಿ, ಸಮಗ್ರವಾಗಿ ಎಲ್ಲರನ್ನೂ ತಪಾಸಣೆಗೊಳಪಡಿಸಿ, ಮಧುಮೇಹ, ರಕ್ತದೊತ್ತಡ ಮತ್ತು ಕ್ಯಾನ್ಸರ್ ರೋಗಗಳಿಂದ ಬಳಲುತ್ತಿರುವ ರೋಗಿಗಳ ತಪಾಸಣೆಯನ್ನು ಸಂಪೂರ್ಣಗೊಳಿಸುವ ಮೂಲಕ ಚಿಕ್ಕಮಗಳೂರು ಜಿಲ್ಲೆಯು ಅದ್ವಿತೀಯ ಸಾಧನೆ ಮಾಡಿದೆ ಎಂದರು.
ಹಾವು ಕಡಿತ ತನಿಖೆಗೆ ಸೂಚನೆ:

ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯಿತಿಗಳಲ್ಲಿ ರಚಿಸಲಾಗಿರುವ ಟಾಸ್ಕ್‍ಫೋರ್ಸ್‍ಗಳನ್ನು ಚುರುಕುಗೊಳಿಸಬೇಕು. ಇದಕ್ಕಾಗಿ ಪ್ರತಿ ಗ್ರಾಮ ಪಂಚಾಯತ್‍ಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಲು ಸಚಿವ ಈಶ್ವರಪ್ಪ ಸೂಚಿಸಿದರು.
ಸಭೆಯಲ್ಲಿ ಶಾಸಕ ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಕೋವಿಡ್ ನಿರ್ವಹಣೆ ಕುರಿತು ಸಭೆಗೆ ಮಾಹಿತಿ ನೀಡಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದುವರೆಗೆ 54746 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪಾ ಮಾತನಾಡಿ, ಕೋವಿಡ್‍ನಿಂದ ಸಾವನ್ನಪ್ಪಿದ ಪ್ರಕರಣಗಳಲ್ಲಿ ಪರಿಹಾರ ಮಂಜೂರಾತಿಗೆ 512 ಅರ್ಜಿ ಸಲ್ಲಿಕೆಯಾಗಿವೆ. ಈ ಪೈಕಿ 365 ಅರ್ಜಿಗಳಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಎಂ.ಎಚ್. ಅಕ್ಷಯ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!