April 28, 2024

MALNAD TV

HEART OF COFFEE CITY

ಬಾಳೆಹೊನ್ನೂರು: ಲಾಡ್ಜ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ

1 min read

 

ಬಾಳೆಹೊನ್ನೂರು:ಕೆಲವು ದಿನಗಳ ಹಿಂದಷ್ಟೇ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿತ್ತು. ಇದೀಗ ಅದೇ ಜಿಲ್ಲೆಯ ಗುತ್ತಿಗೆದಾರನೊರ್ವ ಬುಧವಾರ ಬಾಳೆಹೊನ್ನೂರಿನ‌ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಬೆಳಗಾವಿಯಲ್ಲಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಎಂದು ಗುರುತಿಸಲಾಗಿದೆ. ನಗರದ ಶಿವಮೊಗ್ಗ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ಕಳೆದೊಂದು ವಾರದಿಂದ ವಾಸ್ತವ್ಯ ಹೂಡಿದ್ದ ಬಸವರಾಜ್ ಕಳೆದ ಒಂದು ದಿನದಿಂದ ಹೊರಗೆ ಬಂದಿರಲಿಲ್ಲ ಎನ್ನಲಾಗಿದೆ.

ಈ ಕುರಿತು ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ತೆರೆಸಿ ನೋಡಿದಾಗ ಆತ ಲಾಡ್ಜ್ ಕೋಣೆಯೊಳಗಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿರುವುದು ಕಂಡುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇದೀಗ ಪೊಲೀಸರು ಈ ಕುರಿತು ಬಸವರಾಜ್ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಾಳೆಹೊನ್ನೂರು ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಕುಟುಂಬಸ್ಥರು ಆಗಮಿಸಿದ ನಂತರ ಪ್ರಕರಣ ದಾಖಲಿಸುವುದಾಗಿ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಪೊಲೀಸರ ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!