May 7, 2024

MALNAD TV

HEART OF COFFEE CITY

ಪಿಡಿಒ ಅಮಾನತು ಖಂಡಿಸಿ ಗ್ರಾಮ ಪಂಚಾಯಿತಿ ಬೀಗ ಜಡಿದು ಪ್ರತಿಭಟನೆ

1 min read

 

ಚಿಕ್ಕಮಗಳೂರು. ಗ್ರಾಮ ಪಂಚಾಯಿತಿ ಅಧಿಕಾರಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನ ಅಮಾನತ್ತುಗೊಳಿಸಿರುವುದು ಖಂಡಿನೀಯ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ನಡೆದಿದೆ. ದಾರಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಜಗಳ ನಡೆಯುತ್ತಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶ, ಗ್ರಾಮಸಭೆ ಹಾಗೂ ಗ್ರಾಮ ಪಂಚಾಯಿತಿ ರೆಜ್ಯುಲೇಷನ್, ತಾಲೂಕು ಪಂಚಾಯಿತಿಯ ಇ.ಓ. ಅವರ ಆದೇಶದ ಮೇಲೆ ಗೋಣಿಬೀಡು ಗ್ರಾಮ ಪಂಚಾಯಿತಿ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ದಾರಿಗೆ ಅಡ್ಡವಾಗಿದ್ದ ಗೇಟು ಮತ್ತು ಶೆಡ್ಡನ್ನ ಕಾನೂನಾತ್ಮಕವಾಗಿ ತೆರವುಗೊಳಿಸಿದ್ದಾರೆ. ಈ ಬಗ್ಗೆ ಸರಿಯಾಗಿ ಪರಿಶೀಲನೆ ನಡೆಸದೇ ಪಿಡಿಒ ಅವರನ್ನೇ ಏಕಾಏಕಿ ಅಮಾನತ್ತುಗೊಳಿಸಿರೋದು ಅಮಾಯಕ ಅಧಿಕಾರಿಗೆ ತೊಂದರೆ ನೀಡಿದಂತಾಗಿದೆ. ಹಾಗಾಗಿ, ಅಮಾಯಕ ಪಿಡಿಓ ಅವರ ಅಮಾನತ್ತನ್ನ ವಜಾಗೊಳಿಸಿ ಕೂಡಲೇ ಸೇವೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು. ದಾರಿ ವಿಚಾರವಾಗಿ ಅಣ್ಣ-ತಮ್ಮಂದಿರ ಜಗಳದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಗ್ರಾಮಸಭೆ ಹಾಗೂ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ರೆಜ್ಯುಲೇಷನ್ ಪಾಸ್ ಮಾಡಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗಿತ್ತು. ಅದರಂತೆ ಕಾನೂನಾತ್ಮಕವಾಗಿ ಕ್ರಮ ವಹಿಸಲು ಸೂಚಿಸಿದ್ದರಿಂದ ಪಿಡಿಒ ಮತ್ತು ಗೋಣಿಬೀಡು ಪಿಎಸ್‍ಐ ಅವರು ಸ್ಥಳಕ್ಕೆ ಭೇಟಿ ನೀಡಿ ಗೇಟು ಮತ್ತು ಶೆಡ್ಡನ್ನ ತೆರವುಗೊಳಿಸಿದ್ದಾರೆ.

ಇದನ್ನೇ ತಪ್ಪು ಎನ್ನುವ ರೀತಿಯಲ್ಲಿ ಪಿಡಿಒ ಅವರನ್ನ ಅಮಾನತ್ತುಗೊಳಿಸಲಾಗಿದೆ. ಈ ರೀತಿಯಾದರೆ ಗ್ರಾಮ ಪಂಚಾಯಿತಿಯಲ್ಲಿ ಯಾರೂ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಲ್ಲಾ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು. ಕೂಡಲೇ ಪಿಡಿಓ ಅವರ ಅಮಾನತು ಆದೇಶವನ್ನ ಹಿಂಪಡೆಯದಿದ್ದರೆ ಗ್ರಾಮ ಪಂಚಾಯಿತಿ ಸದಸ್ಯರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ದಿನೇಶ್, ಸದಸ್ಯರಾದ ಸುಪ್ರಿತ್, ವಿಜೇಂದ್ರ, ಪ್ರಹ್ಲಾದ್, ರೇಣುಕಾ, ಭಾರತೀ ಪ್ರಕಾಶ್, ಶರತ್, ಆನಂದ್, ಸೌಭಾಗ್ಯ, ಮಹೇಶ್, ಕೆ.ಆರ್.ಮಹೇಶ್ ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!