May 3, 2024

MALNAD TV

HEART OF COFFEE CITY

ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದನ್ನು ವಿರೋಧಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು: ರಾಯಚೂರಿನಲ್ಲಿ ನಡೆದಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದನ್ನು ವಿರೋಧಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ
ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಸಂಬಂಧಿಸಿದ ವ್ಯಕ್ತಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.

ನಗರದ ಆಜಾದ್‍ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಮುಖಂಡರು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸುವ ಮೂಲಕ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಮಾನ ಮಾಡಿದ್ದು, ವ್ಯಕ್ತಿಯನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಈ ಪ್ರಕರಣದ ಹಿಂದೆ ಕೋಮುವಾದಿ ಶಕ್ತಿಗಳು ಕೆಲಸಮಾಡಿದ್ದು, ಸಮಗ್ರ ತನಿಖೆ ನಡೆಸಿ ಅಂತಹ ವ್ಯಕ್ತಿಗಳ ಹೆಸರನ್ನು ಬಹಿರಂಗ ಪಡಿಸಬೇಕೆಂದು ಪ್ರತಿಭಟನಾ ನಿರತರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಅಂಬೇಡ್ಕರ್‍ಗೆ ಅಪಮಾನಮಾಡಿರುವವರನ್ನು ಸೇವೆಯಿಂದ ವಜಾಗೊಳಿಸಬೇಕು. ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಬೇಕು ಪ್ರತಿಭಟನಾ ನಿರತರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!