May 18, 2024

MALNAD TV

HEART OF COFFEE CITY

ಚಾರ್ಮಾಡಿ ಘಾಟ್‍ನಲ್ಲಿ ದರೋಡೆ:ಪ್ರಕರಣ ದಾಖಲು

1 min read

ಕೊಟ್ಟಿಗೆಹಾರ:ಚಾರ್ಮಾಡಿ ಘಾಟ್ ಅಪಘಾತವಾಗಿದ್ದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ ಹಣ, ಉಂಗುರ ಹಾಗೂ ಮೊಬೈಲ್‍ನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಮೇ 3 ರಂದು ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕಾರಿನಲ್ಲಿ ಹೊರಟಿದ್ದು ಚಾರ್ಮಾಡಿ ಘಾಟ್‍ನಲ್ಲಿ ರಾತ್ರಿ 12-30 ರ ಸುಮಾರಿಗೆ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದವರಿಗೆ ಸಣ್ಣಪುಣ್ಣ ಗಾಯಗಳಾಗಿದ್ದು ಅಂಬುಲೆನ್ಸ್ ಗೆ ಕರೆ ಮಾಡಲು ನೆಟ್ ವರ್ಕ್ ಇಲ್ಲದೆ ಇರುವುದರಿಂದ ಕಾರಿನಲ್ಲೆ ಕುಳಿತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು 600 ಹಣ, ಮೊಬೈಲ್ ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!