May 6, 2024

MALNAD TV

HEART OF COFFEE CITY

ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಮುಖ್ಯಮಂತ್ರಿಯಲ್ಲಿ ಮನವಿ

1 min read

 

ಚಿಕ್ಕಮಗಳೂರು: ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸುವಂತೆ ಮುಖ್ಯಮಂತ್ರಿಗಳ ಬಳಿ ಜಿಲ್ಲೆಯ ಶಾಸಕರ ನಿಯೋಗ ಗುರುವಾರ ತೆರಳಿ ಮನವಿ ಸಲ್ಲಿಸಿದೆ.
ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಬೇಕೆಂಬುದು ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿದ್ದು, ಈ ಸಂಬಂಧ ಬೆಳಿಗ್ಗೆ ಜಿಲ್ಲೆಯ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚಿಕ್ಕಮಗಳೂರಿಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಲು ಅನುಕೂಲವಾಗುವಂತೆ ಮುಂಬರುವ ಬಜೆಟ್‍ನಲ್ಲಿ ಘೋಷಿಸುವಂತೆ ಮನವಿ ಮಾಡಿದ್ದಾರೆ.

ಮೂಡಿಗೆರೆಯಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯವನ್ನು ತೋಟಗಾರಿಕೆ ವಿಶ್ವವಿದ್ಯಾಲಯ ಎಂದು ಘೋಷಿಸಬೇಕು. ಮನವಿ ಸಲ್ಲಿಸಲಾಯಿತು. ಜೊತೆಗೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದಬೆ-ದಬೆ ಫಾಲ್ಸ್, ಹೊನ್ನಮ್ಮನಹಳ್ಳ, ದತ್ತಪೀಠ, ಮಾಣಿಕ್ಯಧಾರಾ, ಭೀಮಗದಾ ತೀರ್ಥ ಈ ಎಲ್ಲಾ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ
ದತ್ತಪೀಠ- ಮುಳ್ಳಯ್ಯನಗಿರಿ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಇದಕ್ಕಾಗಿ ಮುಂಬರುವ 2022-23 ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ 10 ಕೋಟಿ ರೂ. ಅನುದಾನ ಘೋಷಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು.ಈ ಎಲ್ಲಾ ವಿಷಯಗಳಿಶಾಸಕರ ನಿಯೋಗ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ.ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!