May 17, 2024

MALNAD TV

HEART OF COFFEE CITY

ಮೇ 15 ರಂದು ಜೆಡಿಎಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

1 min read

ಚಿಕ್ಕಮಗಳೂರು: ಜಿಲ್ಲಾ ಜೆಡಿಎಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಭಾನುವಾರ(ಮೇ.೧೫) ಉಪ್ಪಳ್ಳಿಯ ಮಾಡೆಲ್ ಇಂಗ್ಲೀಷ್ ಶಾಲೆ ಆವರಣದಲ್ಲಿ ಆಯೋಜಿಸ ಲಾಗಿದೆ ಎಂದು ಜೆಡಿಎಸ್ ಮುಖಂಡ ಬಿ.ಎಂ.ತಿಮ್ಮಶೆಟ್ಟಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್, ಬಿ.ಎಂ.ತಿಮ್ಮಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದರು.
ಶಿಬಿರದಲ್ಲಿ ತಜ್ಞವೈದ್ಯರು, ಸಾಮಾನ್ಯ ಕಾಯಿಲೆ ತಜ್ಞರು, ಮೂಳೆ ತಜ್ಞರು, ಕಣ್ಣಿನ ತಜ್ಞರು, ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು, ದಂತ ತಜ್ಞರು, ಕಿವಿ ಮೂಗು ಗಂಟಲು ತಜ್ಞರು ಶಿಬಿರ ದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.ಕಲ್ಲುದೊಡ್ಡಿ, ಉಪ್ಪಳ್ಳಿ, ವಾರ್ಡ್ ೧೬, ೧೭, ೧೮ರ ನಿವಾಸಿಗಳು ತಪಾಸಣೆ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಈ ಬಾರೀ ೨ಸಾವಿರ ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು. 

‘ನಗರಸಭೆ ಆವರಣದಲ್ಲಿನ ಉದ್ಯಾನವನದಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶವಿಲ್ಲದಿ ದ್ದರು. ನಗರಸಭೆ ಫುಡ್‌ಕೋರ್ಟ್ ನಿರ್ಮಾಣಕ್ಕೆ ಮುಂದಾಗಿದೆ. ಈ ಸಂಬAಧ ಹಸಿರು ನ್ಯಾಯಪೀಠಕ್ಕೆ ದೂರು ಸಲ್ಲಿಸಲಾಗುವುದು ಎಂದು ನಗರಸಭೆ ಸದಸ್ಯ ಎ.ಸಿ.ಕುಮಾರ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬoಧ ಜಿಲ್ಲಾಡಳಿತಕ್ಕೆ ದೂರು ನೀಡಿ ದರು ಪ್ರಯೋಜನವಾಗಿಲ್ಲ. ಈಗಾಗಲೇ ಆನ್‌ಲೈನ್ ಟೆಂಡರ್ ಕರೆಯಲಾಗಿದ್ದು ಶೀಘ್ರವೇ ಟೆಂಡರ್ ರದ್ದುಪಡಿಸಿ ಬೇರೆಡೆಯಲ್ಲಿ ಫುಡ್‌ಕೋರ್ಟ್ ನಿರ್ಮಿಸಬೇಕೆಂದು ಆಗ್ರಹಿಸಿದರು.
ಬೊಳರಾಮೇಶ್ವರ ದೇವಸ್ಥಾನ ಆವರಣದಲ್ಲಿ ನಗರಸಭೆಯಿಂದ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದೆ. ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು, ನಗರಸಭೆ ವ್ಯಾಪ್ತಿಗೆ ಬರುವುದಿಲ್ಲ. ಈ ಸಂಬoಧ ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.

ನಗರದಲ್ಲಿ ಅಕ್ರಮ ಕಟ್ಟಡಗಳು ನಿರ್ಮಾಣವಾಗುತ್ತಿದ್ದು ನಗರಸಭೆ ಕಠಿಣ ಕ್ರಮಕೈಗೊಳ್ಳು ವಂತೆ ಆಗ್ರಹಿಸಿದ ಅವರು, ಖಾಸಗಿ ಬಸ್ ನಿಲ್ದಾಣ ಕಸದಿಂದ ಕಲುಷಿತಗೊಂಡಿದ್ದು, ನಗರಸಭೆಯಿಂದ ಸ್ವಚ್ಛತೆಕಾರ್ಯ ನಡೆಸಬೇಕು. ತಪ್ಪಿದಲ್ಲಿ ತಾವೇ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುವುದಾಗಿ ತಿಳಿಸಿದ ಅವರು, ಪ್ಲಾಕ್ಸ್ ಅಳವಡಿಕೆ ಸಂಬoಧ ನಗರಸಭೆ ಅಧ್ಯಕ್ಷರು ಕಾನೂನು ಬಾಹಿರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯ ಎ.ಸಿ.ಕುಮಾರ್, ಜೆಡಿಎಸ್ ಮುಖಂಡ ರಾದ ಸಿ.ಕೆ.ಮೂರ್ತಿ, ದೇವಿಪ್ರಸಾದ್, ಚಿದಾನಂದ, ನಿಶಾತ್ ಅಹಮದ್ ಇದ್ದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!