May 2, 2024

MALNAD TV

HEART OF COFFEE CITY

ರಾಜ್ಯ ಮತ್ತು ಜಿಲ್ಲೆಯಲ್ಲಿ ಗಲಭೆ ನಡೆಸುವ ಹುನ್ನಾರ ನಡೆಯುತ್ತಿದೆ : ಹೆಚ್.ಹೆಚ್.‌ದೇವರಾಜ್

1 min read

ಚಿಕ್ಕಮಗಳೂರು: ರಾಜ್ಯ ಮತ್ತು ಜಿಲ್ಲೆಯಲ್ಲಿ ಮತೀಯ ಗಲಭೆ ಸೃಷ್ಠಿಸಲು ಹಿಂಬಾಗಿನಿoದ ಹುನ್ನಾರ ನಡೆಸಲಾಗುತ್ತಿದೆ. ಇದರ ಹಿಂದಿರುವ ಕಾಣದ ಕೈಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುಬೇಕೆಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗುರು ದತ್ತಾತ್ರೇ ಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸಿದ್ದಾ ರೆಂಬ ವಿಡಿಯೋ ಮತ್ತು ಸಂಘ ಪರಿವಾರದ ಕಾರ್ಯಕರ್ತರಿಗೆ ಬoದೂಕು ತರಬೇತಿ ಇದರ ಹಿಂದೆ ಜಿಲ್ಲೆಯ ಪ್ರಭಾವಿ ಶಾಸಕರ ಕೈವಾಡವಿದೆ ಎಂಬ ಅನುಮಾನವಿದೆ ಎಂದರು.ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂಬoಧ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದ ಅವರು, ರೈಫಲ್ ತರಬೇತಿ ನೀಡಲು ಸಂಘ ಪರಿವಾರದವರಿಗೆ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದರು. ಈ ಎರಡು ಪ್ರಕರಣದಲ್ಲಿ ಬಿಜೆಪಿ ಶಾಸಕರ ಕೈವಾಡ ಇರುವ ಬಗ್ಗೆ ಅನುಮಾನವಿದ್ದು, ೧೫ ದಿನಗಳಲ್ಲಿ ತನಿಖೆ ನಡೆಸಿ ಕಠಿಣ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೇ, ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿ ದರು.

ಹಲಾಲ್, ಮಾವಿನಹಣ್ಣು, ಅಜಾನ್ ಗೊಂದಲ ಸೃಷ್ಟಿಯಾಗಿದ್ದು ಜಿಲ್ಲೆಯಿಂದ ರಾಜ್ಯ ಅಪಾಯದ ಅಂಚಿನಲ್ಲಿದೆ. ಎಲ್ಲರೂ ಒಗ್ಗೂಡಿ ಬಾಳಬೇಕೆನ್ನುವುದು ಜಿಲ್ಲೆಯ ಜನತೆಯ ಆಶಯವಾಗಿದೆ. ಜಿಲ್ಲೆಯಲ್ಲಿ ಗೊಂದಲ ಸೃಷ್ಠಿ ಮಾಡಬಾರದು ಎಂದು ಮನವಿ ಮಾಡಿದರು.ಸಿ.ಟಿ.ರವಿ ಸುಳ್ಳಿನ ರಾಜ, ಯಾವುದೇ ಶಾಸಕರು ಇಷ್ಟು ಸುಳ್ಳು ಹೇಳಿಲ್ಲ. ಜನರ ಬದುಕಿನ ಬಗ್ಗೆ ಚಿಂತನೆ ಮಾಡದೇ ಹಣ ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದು ದೂರಿ ದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಶೇ.೪೦ರಷ್ಟು ಹೆಚ್ಚಿಸಿದ ಪರಿ ಣಾಮ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈಗ ಪೆಟ್ರೋಲ್ ಪ್ರತೀ ಲೀಟರ್‌ಗೆ ೯.೫೦ರೂ. ಹಾಗೂ ಡಿಸೇಲ್ ಬೆಲೆ ೭ರೂ. ಕಡಿಮೆ ಮಾಡಿದೆ. ಇದು ಅವೈಜ್ಞಾನಿಕವಾಗಿದ್ದು, ವೈಜ್ಞಾನಿಕವಾಗಿ ಹಿಂದಿನ ಬೆಲೆಗೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡ ರವೀಶ್ ಬಸಪ್ಪ ಮಾತನಾಡಿ, ಶಾಲಾ ಪಠ್ಯಕ್ರಮದಲ್ಲಿ ಕನ್ನಡ ನಾಡಿನ ಶ್ರೇಷ್ಠವ್ಯಕ್ತಿಗಳ ಚರಿತ್ರೆಯನ್ನು ಕೈಬಿಡಲಾಗಿದೆ. ಪಠ್ಯಕ್ರಮ ಸಮಿತಿಯಲ್ಲಿ ರೋಹಿತ್ ಚಕ್ರತೀರ್ಥ ಸದಸ್ಯರನ್ನಾಗಿ ಮಾಡಲಾಗಿದೆ. ಅವರು ಶಿಕ್ಷಣ ತಜ್ಞರಲ್ಲ. ಪೂರ್ವಗ್ರಹ ಪೀಡಿತರಾಗಿ ಕನ್ನಡ ಭಾಷೆಗೆ ಅಪಾರ ಕೊಡುಗೆ ನೀಡಿದವರನ್ನು ಪಠ್ಯದಿಂದ ಹೊರಗಿಟ್ಟಿರುವುದು ಸರಿಯಲ್ಲ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಎಂ.ಡಿ.ರಮೇಶ್, ತನುಜ್‌ಕುಮಾರ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!