May 6, 2024

MALNAD TV

HEART OF COFFEE CITY

ಶಾಸಕ ಸಿ.ಟಿ ರವಿ ಅವರಿಗೆ ಪಿತೃವಿಯೋಗ

1 min read

 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿಯವರ ತಂದೆ ತಿಮ್ಮೇಗೌಡ(92)ವಯೋಸಹಜ ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶ್ರೀಯುತರ ಅಂತಿಮ ದರ್ಶನಕ್ಕಾಗಿ ಭಾನುವಾರ ಬೆಳಿಗ್ಗೆ 6 ರಿಂದ 11ಗಂಟೆಯವರೆಗೆ ಆಲ್ದೂರಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಸಮೀಪದಲ್ಲಿರುವ ಮೃತರ ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ಬೆಳಿಗ್ಗೆ 11.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!