May 21, 2024

MALNAD TV

HEART OF COFFEE CITY

ನಾರಾಯಣ ಗುರುಗಳನ್ನು ರಾಜಕೀಯ ವಿಚಾರಕ್ಕೆ ಬಳಸಬಾರದು -ಬಿ.ರಾಜಪ್ಪ.

1 min read

ಚಿಕ್ಕಮಗಳೂರು: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ರಾಜಕೀಯ ವಿಚಾರಕ್ಕೆ ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿ ಗರ ಸಂಘದ ಸಂಘಟನಾ ಕಾರ್ಯದರ್ಶಿ ಬಿ.ರಾಜಪ್ಪ ತಿಳಿಸಿದರು.ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಹೇಳಿಕೊಂಡು ರಾಜಕೀಯ ಮಾಡ ಲಾಗುತ್ತಿದೆ. ಪಠ್ಯದಲ್ಲಿ ನಾರಾಯಣ ಗುರುಗಳ ಪಾಠವನ್ನು ಕೈಬಿಡಲಾಗಿದೆ ಎಂದು ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ದೂರಿದರು.ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸುನೀಲ್‌ಕುಮಾರ್ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ ಧಾರೆಗಳನ್ನು ಕೈಬಿಟ್ಟಿಲ್ಲ 7 ಮತ್ತು 10ನೇ ತರಗತಿಯಲ್ಲಿ ಗುರುಗಳ ಜೀವನ ಚರಿತ್ರೆ ಹಾಗೂ ಸಂದೇಶವನ್ನು ಅಳವಡಿಸ ಲಾಗಿದೆ ಎಂದು ತಿಳಿಸಿ ವಿವಾದಕ್ಕೆ ತೆರೆ ಎಳೆದಿದ್ದಾರೆ ಎಂದರು.

ಈ ವಿಚಾರವನ್ನು ಅನಗತ್ಯವಾಗಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇನ್ನೂ ಮುಂದೇ ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಬಾರದು, ಬz ವoಲಿಗೆ ಪ್ರತೀನಿತ್ಯ ನಮ್ಮನ್ನು ಕಾಡುತ್ತಿರುವ ಸಮಸ್ಯೆಗಳು ಮತ್ತು ರೈತಾಪಿ ವರ್ಗ ಹಾಗೂ ಮಧ್ಯಮ ವರ್ಗದವರ ಸಮಸ್ಯೆಗಳ ಬಗ್ಗೆ ಚರ್ಚಿಸಲಿ ಎಂದು ಆಗ್ರಹಿಸಿದರು.
ಅನೇಕ ವರ್ಷಗಳಿಂದ ಬ್ರಹ್ಮಶ್ರೀ ನಾರಾಯಣಗುರುಗಳ ನಿಗಮ ಮಂಡಳಿ ಸ್ಥಾಪನೆ ಮಾಡಿ ಕುಲಕಸುಬು ಕಳೆದುಕೊಂಡು ಶೋಚನೀಯ ಸ್ಥಿತಿಯಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಪುನರ್ವಸತಿ ಜೊತೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು. ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ನೀಡಬೇಕು. ನಾರಾಯಣ ಗುರುಪೀಠ ಸ್ಥಾಪನೆಗೆ 500 ಕೋಟಿ ರೂ. ಅನುದಾನ ಶೀಘ್ರವೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಂಜುನಾಥ್, ಸಂತೋಷ್ ಕೋಟ್ಯಾನ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!