April 30, 2024

MALNAD TV

HEART OF COFFEE CITY

ಪ್ರವಾಸಿ ತಾಣದಲ್ಲಿ ಮೋಜು ಮಸ್ತಿ,ಎಸ್ಪಿ ಖಡಕ್ ಎಚ್ಚರಿಕೆ

1 min read

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದ ಯುವಕ ಯುವತಿಯರು ಮುಳ್ಳಯ್ಯನಗಿರಿ ಅತ್ಯಂತ ಅಪಾಯಕಾರಿ ರಸ್ತೆಯಲ್ಲಿ ಜೀಪ್ ಟಾಪ್‍ನಲ್ಲಿ ಕುಳಿತು ಪ್ರಯಾಣ ಬೆಳೆಸಿದ್ದು ಇದನ್ನು ಕಂಡ ಪೊಲೀಸರು ಜೀಪ್ ತಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಳ್ಳಯ್ಯನಗಿರಿ ಪ್ರದೇಶಕ್ಕೆ ಸಾಗುವ ದಾರಿಯಲ್ಲಿ ಅತ್ಯಂತ ಕಡಿದಾದ ತಿರುವುಗಳಿದ್ದು, ಮೋಜು ಮಸ್ತಿಯಲ್ಲಿ ತೊಡಗಿದ್ದ ಯುವಕ ಯುವತಿಯರು ಜೀಪ್‍ನ ಮೇಲ್ಬಾಗದಲ್ಲಿ ಕುಳಿತು ಸಂಚಾರ ನಡೆಸಿದ್ದಾರೆ. ಈ ಯುವಕ ಯುವತಿಯರು ಮತ್ತಿನ ನಶೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕೈಮರದಿಂದ ಗಿರಿಶ್ರೇಣಿಗೆ ಸಾಗುವ ಮಾರ್ಗದಲ್ಲಿ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಜೀಪ್‍ನ ಮೇಲ್ಬಾಗದಲ್ಲಿ ಕುಳಿತು ಅತೀವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲಯಿಸುತ್ತಿರುವುದು ಕಂಡು ಬಂದಿದ್ದು ವಾಹನ ಚಾಲಕನ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪಿನಲ್ಲಿದ್ದ 4 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಜೀಪಿನಲ್ಲಿದ್ದವರು ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಈ ಹಿನ್ನಲೆಯಲ್ಲಿ ಇವರ ವಿರುದ್ಧ ಎನ್‍ಡಿಪಿ ಎಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!