May 6, 2024

MALNAD TV

HEART OF COFFEE CITY

ರಾಯಚೂರು ಅಂಬೇಡ್ಕರ್ ಪೋಟೋ ವಿವಾದ, ಘಟನೆ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

1 min read

 

ಚಿಕ್ಕಮಗಳೂರು: ರಾಯಚೂರು ನ್ಯಾಯಲಯದ ಆವರಣದಲ್ಲಿ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಭಾವಚಿತ್ರ ತಗೆದ ಬಳಿಕ ಧ್ವಜಾರೋಹಣ ಮಾಡುವುದಾಗಿ ಹೇಳಿದ್ದ ಅಲ್ಲಿನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತಗದುಕೊಳ್ಳಬೇಕು ಹಾಗೂ ಕೆಲಸದಿಂದ ವಜಾಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಗಾಂಧಿ ಪ್ರತಿಮೆ ಎದುರು ಸೋಮವಾರ ಮೌನ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಲಾಯಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಹೆಚ್.ಹೆಚ್ ದೇವರಾಜ್, ನ್ಯಾಯಾಧೀಶರ ಅವಿವೇಕಿತನದ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದ್ದು, ವಿವೇಚನೆ ಇಲ್ಲದೇ ವರ್ತನೆ ಮಾಡಿದ ನ್ಯಾಯಾಧೀಶರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಮಾತನಾಡಿದ ಅವರು ಜಾತಿ, ಧರ್ಮದ ಬೇಧಭಾವ ಇರುವ ಮನುವಾದಿ ವ್ಯಕ್ತಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೆಲಸ ಮಾಡಿದರೆ ಸಾಮಾನ್ಯ ವರ್ಗದ ಜನರಿಗೆ ನ್ಯಾಯ ಸಿಗುವುದಿಲ್ಲ. ಇಂತಹ ವ್ಯಕ್ತಿಯನ್ನು ಕೆಲಸದಿಂದ ವಜಾಗೊಳಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ವತಿಯಿಂದ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಲ್ ಮೂರ್ತಿ ಮಾತನಾಡಿ, ಈ ಘಟನೆಯಿಂದ ದೇಶದ ವ್ಯಕ್ತಿ ಗೌರವಕ್ಕೆ ಪೆಟ್ಟು ಬಿದ್ದಿದೆ. ಇಲ್ಲಿಯ ವರೆಗೆ ಗಾಂಧಿಗೆ ಅವಮಾನ ಮಾಡಲಾಗುತ್ತಿತ್ತು ಈಗ ಬಹಿರಂಗವಾಗಿ ಅಂಬೇಡ್ಕರ್‍ಗೆ ಅವಮಾನ ಮಾಡಲಾಗಿದ್ದು ಇದು ಮನುಷ್ಯುತ್ವ ಇಲ್ಲದ ವರ್ತನೆ ಎಂದರು.

ಈ ಘಟನೆಯನ್ನು ಕಾಂಗ್ರೆಸ್ ಮಾತ್ರ ಅಲ್ಲ, ಇಡೀ ದೇಶ ಖಂಡಿಸಬೇಕು. ದೇಶದ ಮಹಾನ್ ನಾಯಕರಿಗೆ ಇತ್ತೀಚ್ಚೆಗೆ ಅವಮಾನ ಮಾಡುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ ಶಿವಾನಂದ ಸ್ವಾಮಿ ಮಾತನಾಡಿ, ಇಡೀ ದೇಶದಲ್ಲಿ ಅಂಬೇಡ್ಕರ್, ಗಾಂಧಿ ಇಂತಹ ಮಹಾನ್ ನಾಯಕರ ಭಾವಚಿತ್ರಗಳನ್ನು ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಇಟ್ಟು ಪೂಜೆ ಸಲ್ಲಿಸುವುದು ಈ ದೇಶದ ಸಂಪ್ರದಾಯ. ಈ ವಿಷಯದಲ್ಲಿ ನ್ಯಾಯಾಧೀಶರಾದವರು ಸೌಜನ್ಯವನ್ನು ಮರೆತು ವರ್ತಿಸಿರುವುದು ದುರಂತ ಎಂದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಸಂವಿಧಾನದ ವಿಧಿವಿಧಾನಗಳೆಲ್ಲವೂ ಸಹ ನ್ಯಾಯಾಧೀಶರಿಗೆ ತಿಳಿದಿರುತ್ತದೆ. ಆದರೂ ಸಹ ಈ ರೀತಿಯ ನ್ಯಾಯಾಧೀಶರ ವರ್ತನೆಯಿಂದ ಇಡೀ ದೇಶಕ್ಕೆ ಅವಮಾನ ಮಾಡಿದಂತಾಗಿದ್ದು ಈ ರೀತಿಯ ನಡವಳಿಕೆಗಳನ್ನು ಖಂಡಿಸಬೇಕು ಎಂದರು

ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ನಯಾಜ್ ಖಾನ್, ಕಾಂಗ್ರೆಸ್ ಮುಖಂಡ ಬಿ.ಹೆಚ್ ಹರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಸೇರಿದಂತೆ ಹಲವು ನಾಯಕರು ಮಾತನಾಡಿದರು. ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಲಕ್ಷ್ಮಣ್, ಶಾದಾಬ್ ಖಾನ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!