May 17, 2024

MALNAD TV

HEART OF COFFEE CITY

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ -800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮ್ಯಾರಥಾನ್ ನಡಿಗೆ

1 min read

ಚಿಕ್ಕಮಗಳೂರು: ಕುವೆಂಪು ವಿದ್ಯಾನಿಕೇತನ ಶಾಲೆ ವಿದ್ಯಾರ್ಥಿಗಳು ಹಸಿರಿನ ಮಹತ್ವ ಕುರಿತು ಜನಜಾಗೃತಿ ಮೂಡಿಸುವ ಮೂಲಕ ವಿಶ್ವ ಪರಿಸರ ದಿನವನ್ನು ಭಾನುವಾರ ಆಚರಿಸಿದರು.
ನಗರದ ತಾಲ್ಲೂಕು ಕಚೇರಿ ಆವರಣದಿಂದ ಆಜಾದ್‍ಪಾರ್ಕ್ ವೃತ್ತದವರೆಗೂ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮ್ಯಾರಥಾನ್ ನಡಿಗೆ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಪರಸರ ಕಾಳಜಿ ಮೂಡಿಸಿದರು.ಇದೇ ವೇಳೆ ಹಸಿರನ್ನು ಉಳಿಸಿ ಬೆಳೆಸುವ ಕುರಿತು ವಿದ್ಯಾರ್ಥಿಗಳು ಪ್ರತಿಜ್ಞೆ ಕೈಗೊಂಡರು. ವಿದ್ಯಾರ್ಥಿಗಳು ಬೀದಿನಾಟಕ ಹಾಗೂ ಹಸಿರು ಗೀತೆ ಮತ್ತು ಪರಿಸರ ಗೀತೆ ಹಾಡುವ ಮೂಲಕ ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದ ಶಾಲೆಯ ಕಾರ್ಯದರ್ಶಿ ಕೆ.ಸಿ.ಶಂಕರ್ ಮಾತ ನಾಡಿ, ನಮ್ಮ ಸುತ್ತಮುತ್ತಲ ಪರಿಸರವನ್ನು ಇಳಿಸಿ ಬೆಳೆಸಲು ಮುಂದಾಗದಿದ್ದಲ್ಲಿ ಮುಂದಿನ ಪೀಳೀಗೆಯವರ ಬದುಕು ದುಸ್ಥರವಾಗಲಿದೆ. ಹಸಿರು ಮತ್ತು ಸುಂದರ ಪರಿಸರಕ್ಕಾಗಿ ಪ್ರತಿ ಯೊಬ್ಬರೂ ತಪ್ಪದೇ ಗಿಡ ನೆಟ್ಟು ಬೆಳೆಸಬೇಕು ಎಂದು ಸಲಹೆ ನೀಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿಕುಮಾರ್ ತಾಲ್ಲೂಕು ಕಚೇರಿ ಆವರಣದಲ್ಲಿ ಮ್ಯಾರ ಥಾನ್ ನಡಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಕುವೆಂಪು ವಿದ್ಯಾ ನಿಕೇತನದ ಟ್ರಸ್ಟಿ ಅರ್ಚನಾ ಶಂಕರ್, ಪ್ರಾಂಶುಪಾಲ ರಾಘವೇಂದ್ರ, ಮುಖ್ಯ ಶಿಕ್ಷಕರಾದ ಹೊನ್ನಾಂಭಿಕ, ಅಕ್ಷತಾ, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುವೆಂಪು ವಿದ್ಯಾನಿಕೇತನ ಶಾಲೆ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!