May 17, 2024

MALNAD TV

HEART OF COFFEE CITY

ಪ್ರಧಾನಿ ಮೋದಿಯವರ 8 ವರ್ಷದ ಆಡಳಿತ ಭ್ರಷ್ಟಾಚಾರ ರಹಿತದ್ದು : ಎಂ.ಕೆ. ಪ್ರಾಣೇಶ್

1 min read

ಚಿಕ್ಕಮಗಳೂರು: ದೇಶದ ಕಟ್ಟಕಡೆಯ ವ್ಯಕ್ತಿಯ ಏಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ ಮತ್ತು ಭ್ರಷ್ಟಚಾರ ರಹಿತ ಸ್ವಚ್ಛ ಆಡಳಿತವನ್ನು ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ತಿಳಿಸಿದರು.ಕೇಂದ್ರ ಸರ್ಕಾರ 8 ವರ್ಷ ಆಡಳಿತ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಸೋಮವಾರ ನಗರ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 8ವರ್ಷದ ಅವಧಿಯಲ್ಲಿ ಆಯುಷ್ಮಾನ್ ಭಾರತ್, ಉಜ್ವಲಾ ಯೋಜನೆ, ಜನ್‌ಧನ್ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಬೆಳೆವಿಮಾ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ, ಸ್ವಚ್ಛಭಾರತ್, ಮುದ್ರಾ ಯೋಜನೆಗಳನ್ನು ಜಾರಿಗೊಳಿಸಿ ಎಲ್ಲಾ ಸಮುದಾಯಗಳ ಏಳಿಗೆಗೆ ಶ್ರಮಿಸಿದ್ದಾರೆ ಎಂದರು.ಮಹಾಮಾರಿ ಕೋವಿಡ್ ಸಂದರ್ಭವನ್ನು ದೇಶ ಅತ್ಯಂತ ದಕ್ಷತೆಯಿಂದ ಎದುರಿಸಿದೆ.ಮೇಕ್ ಇನ್ ಇಂಡಿಯಾ ಯೋಜನೆ ರೂಪಿಸಿ ಅದರಲ್ಲಿ ಯಶ ಕಂಡಿದೆ. ಹೊಸ ರಾಷ್ಟಿçÃಯ ಶಿಕ್ಷಣ ನೀತಿಯನ್ನು ರೂಪಿಸಿದೆ. ಅನೇಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆ ತಾಣ ಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸಿದೆ ಎಂದು ತಿಳಿಸಿದರು.

ಸಮಾಜದ ಕಟ್ಟೆ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ಅತ್ಯಂತ ಪಾರದರ್ಶಕವಾಗಿ ತಲುಪಿಸುವ ಕೆಲಸವನ್ನು ಮಾಡಲಾಗಿದೆ. ಹಾಗೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಹುಪಾಲು ಅನುದಾನವನ್ನು ನೀಡಿದೆ. ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸು ನನಸಾಗಿ ಸಲು ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದರು.
ಕೇAದ್ರ ಸರ್ಕಾರ 376ಕ್ಕೂ ಹೆಚ್ಚು ಯೋಜನೆಗಳನ್ನು ತಂದಿದ್ದು, ಇದರಲ್ಲಿ ಜಿಲ್ಲೆಗೂ ಸಿಂಹ ಪಾಲು ದೊರೆತಿದೆ ಎಂದ ಅವರು, 5.58ಲಕ್ಷ ಜನರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಲಾಗಿದ್ದು, 26ಸಾವಿರ ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಜನ್ ಧನ್ ಯೋಜನೆಯಡಿ 2.28 ಲಕ್ಷ ಖಾತೆಗಳನ್ನು ತೆರೆಯಲಾಗಿದ್ದು, 114 ಕೋಟಿ ರೂ. ಜಮಾ ಮಾಡಲಾಗಿದೆ. ಕಿಸಾಮ್ ಸಮ್ಮಾನ್ ಯೋಜನೆಯಡಿ 1.19 ಲಕ್ಷ ಫಲಾನುಭವಿಗಳು 185.5 ಕೋಟಿಗಳನ್ನು 10 ಕಂತುಗಳಲ್ಲಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಬೆಳೆವಿಮೆ ಯೋಜನೆಯಡಿ 24,224 ಫಲಾನುಭವಿಗಳು 98 ಕೋಟಿ ಹಣ ಪಡೆದು ಕೊಂಡಿ ದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 7858 ಫಲಾನುಭವಿಗಳು ಮನೆ ನಿರ್ಮಿಸಿ ಕೊಂಡಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಸ್ವಸಹಾಯ ಸಂಘಗಳು, ಪಶು ಸಂಗೋಪಾನ ಯೋಜನೆ, ಸ್ವಯಂ ಉದ್ಯೋಗ, ಕೃಷಿ ಯಂತ್ರೋಪಕರಣ, ರೇಷ್ಮೇ, ಹನಿ ನೀರಾವರಿ ಯೋಜನೆ ಹೀಗೆ ಅನೇಕ ಯೋಜನೆಗಳ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ವಿರೋಧ ಪಕ್ಷಗಳಿಗೆ ವಿರೋಧ ಮಾಡಲು ಯಾವುದೇ ವಿಚಾರಗಳು ಇಲ್ಲವಾಗಿದ್ದು, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದರು.ತರೀಕೆರೆ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದು ಕಪ್ಪುಚುಕ್ಕಿ ಇಲ್ಲದಂತೆ ಯಶಸ್ವಿ ಆಡಳಿತವನ್ನು ನೀಡಿದ್ದಾರೆ. ಜಿಲ್ಲೆಯ ಕಡೂರು, ತರೀ ಕೆರೆ, ಚಿಕ್ಕಮಗಳೂರು ಭಾಗದ 200 ಕೆರೆಗಳನ್ನು ತುಂಬಿಸುವ ಯೋಜನೆಗೆ ಮೊದಲ ಹಂತದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 2ನೇ ಹಂತದ ಅನುದಾನ ಶೀಘ್ರವೇ ಬಿಡುಗಡೆಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಪ್ರತೀ ಮನೆಗೂ ಶುದ್ಧ ಕುಡಿಯುವ ನೀರು ಕೊಡುವ ಯೋಜನೆ ನಮ್ಮ ಜಿಲ್ಲೆಗೂ ಮಂಜೂರಾಗಿದೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮುರುಡಪ್ಪ ಮಾತನಾಡಿ, ಜೂ.8ರಿಂದ ಪಕ್ಷದಿಂದ ಪ್ರತೀ ತಾಲ್ಲೂಕಿನಲ್ಲಿ ಸರ್ಕಾರದ ಫಲಾನುಭವಿಗಳ ಜೊತೆ ಸಂವಾದ ನಡೆಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಯುವ ಮೋರ್ಚಾ ವತಿಯಿಂದ ಜೂ.14 ಮತ್ತು 15ರಂದು ಬೈಕ್ ರ‍್ಯಾಲಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನತೆಗೆ ತಿಳಿಸುವ ಕೆಲಸ ಮಾಡಲಿದ್ದಾರೆ ಎಂದರು.
ಸುದ್ದುಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಆನಂದಪ್ಪö, ಕವಿತಾ ಶೇಖರ್, ರವೀಂದ್ರ ಬೆಳವಾಡಿ, ದೀಪಕ್ ದೊಡ್ಡಯ್ಯ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!