May 6, 2024

MALNAD TV

HEART OF COFFEE CITY

ಸೇವೆಯಿಂದ ವಜಾಗೊಳಿಸಲು ಆಗ್ರಹ

1 min read

ಚಿಕ್ಕಮಗಳೂರು: ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಸಿದರೆನ್ನಲಾದ ನ್ಯಾಯಾಧೀಶರೊಬ್ಬರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಸಾಗರಬಣ) ಸೋಮವಾರ ಮನವಿ ಸಲ್ಲಿಸಿದೆ.
ದೇಶದ ಸಂವಿಧಾನ ಮತ್ತು ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಹಿನ್ನಲೆಯಲ್ಲಿ ನ್ಯಾಯಾಧೀಶರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಅವರನ್ನು ತಕ್ಷಣ ಬಂಧಿಸಬೇಕೆಂದು ಅಪರ ಜಿಲ್ಲಾಧಿಕಾರಿ ರೂಪ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರವನ್ನಿಡಬೇಕೆಂದು ಸರ್ಕಾರ ಆದೇಶನೀಡಿದ್ದು, ಆ ಆದೇಶವನ್ನು ಧಿಕ್ಕರಿಸುವ ಮೂಲಕ ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸುವ ಮೂಲಕ ದೇಶದ ಜನರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ದಲಿತ ಸಂಘರ್ಷ ಸಮಿತಿ ಜಿಲ್ಲಾಸಂಚಾಲಕ ಬಿಳೇಕಲ್ಲು ಬಾಲಕೃಷ್ಣ, ಸಂಘಟನಾ ಸಂಚಾಲಕರಾದ ಯಲಗುಡಿಗೆ ಬಸವರಾಜ್, ತುಡುಕೂರು ಯೋಗೇಶ್, ತಾಲೂಕು ಸಂಚಾಲಕ ಕೂದುವಳ್ಳಿ ಸತೀಶ್, ಸಂಘಟನಾ ಸಂಚಾಲಕ ಗಿರೀಶ್ ಕಲ್ಲುಗುಡ್ಡೆ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!