May 20, 2024

MALNAD TV

HEART OF COFFEE CITY

ಅತ್ಯಾಚಾರ ಯತ್ನ ಆರೋಪಿ ಬಂಧನ

1 min read

ಚಿಕ್ಕಮಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿ ಸುವಲ್ಲಿ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೊಲೀಸರು ಯಶಸ್ವಿಯಾಗಿದ್ದಾರೆ.
ಅತ್ಯಾಚಾರ ಆರೋಪದಡಿಯಲ್ಲಿ ಗೋಣಿಬೀಡು ಗ್ರಾಮದ ದೇವರಾಜ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ವಿದ್ಯಾರ್ಥಿನಿಯೊಬ್ಬರು ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ದೇವರಾಜ್ ಡ್ರಾಪ್ ನೀಡುವುದಾಗಿ ಹೇಳಿ ವಿದ್ಯಾರ್ಥಿ ನಿಯನ್ನು ಸ್ಕೂಟಿಯಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಈ ಸಂಬಂಧ ವಿದ್ಯಾರ್ಥಿನಿ ಹಾಗೂ ಪೋಷಕರು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದೇವರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ದೇವರಾಜ್‍ನನ್ನು ಬಂಧಿಸಿದ್ದಾರೆ.

ದೇವರಾಜ್ ಮೇಲೆ ಈ ಹಿಂದೆಯೂ ಅತ್ಯಾಚಾರ ಪ್ರಕರಣ ದಾಖಲಾಗಿ ಜೈಲು ಪಾಲಾಗಿದ್ದ ನಂತರ ಜಾಮೀನು ಮೇಲೆ ಹೊರ ಬಂದು ಗೋಣಿಬೀಡು ಗ್ರಾಮ ಪಂಚಾಯತ್ ಕಚೇರಿ ಯಲ್ಲಿ ಅಟೆಂಡರ್‍ರಾಗಿ ಕಾರ್ಯನಿರ್ವಹಿಸುತ್ತಿದ್ದ. ಇತ್ತೀಚೆಗೆ ಮತ್ತೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!