May 21, 2024

MALNAD TV

HEART OF COFFEE CITY

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿ ಜನತಾ ಪಾರ್ಟಿ ಸ್ಪರ್ಧೆ -ಬಿ ಟಿ ಲಲಿತಾ ನಾಯಕ್

1 min read

ಚಿಕ್ಕಮಗಳೂರು: ಭ್ರಷ್ಟಚಾರ ನಿರ್ಮೂಲನೆ ಮತ್ತು ಸರ್ವೋದಯ ಕಲ್ಪನೆ ಜನತಾ ಪಾರ್ಟಿಯ ಮುಖ್ಯಧ್ಯೇಯವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿ ಜನತಾ ಪಾರ್ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಜನತಾ ಪಾರ್ಟಿ ರಾಜ್ಯಾಧ್ಯಕ್ಷೆ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯ ವಸ್ಥೆ ಹದಗೆಟ್ಟಿದೆ. ಕೊಲೆ, ಸುಲಿಗೆ, ಅತ್ಯಾಚಾರ, ಆತ್ಮಹತ್ಯೆ ಹಾಗೂ ಕೋಮುಗಲಭೆ ಪ್ರಚೋ ದನಕಾರಿ ಕೃತ್ಯಗಳು ನಿತ್ಯ ನಡೆಯುತ್ತಿದೆ. ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ನಡೆದ ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮದಿಂದ ಅಭ್ಯರ್ಥಿಗಳು ಅತಂತ್ರ ರಾಗಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಅಷ್ಟು ಅಭ್ಯರ್ಥಿಗಳು ಶಿಕ್ಷೆಗೆ ಗುರಿಯಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಕ್ರಮ ತನಿಖೆಯನ್ನು ಶೀಘ್ರವೇ ಪೂರ್ಣಗೊಳಿಸಿ ಅಪರಾಧಿ ಗಳಿಗೆ ಶಿಕ್ಷೆ ಕೊಡಿ ನಿರಾಪರಾಧಿಗಳಿಗೆ ಕೆಲಸ ಕೊಡಿ ಎಂದು ರಾಜ್ಯಸರ್ಕಾರವನ್ನು ಆಗ್ರಹಿ ಸಿದರು.
ಶಾಲಾ ಪಠ್ಯಕ್ರಮವನ್ನು ಕೇಸರಿಕರಣಗೊಳಿಸಲು ಸರ್ಕಾರ ಮುಂದಾಗಿದೆ. ಬಿಜೆಪಿ ಪಕ್ಷದ ನಾಯಕರ ಹಿಂಬಾಲಕರನ್ನು ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇವರು ಬ್ರಹ್ಮಶ್ರೀ ನಾರಾಯಣ ಗುರು, ಬಸವಣ್ಣ, ಕುವೆಂಪು, ಅಂಬೇಡ್ಕರ್ ವಿಚಾರಧಾರೆ ಗಳನ್ನು ತಿರುಚುವ ಕೆಲಸ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಠಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞರಲ್ಲ, ಅತ್ಯಂತ ಪಾಂಡಿತ್ಯ ವನ್ನು ಹೊಂದಿದವರು ಅಲ್ಲ. ಇಂತವರಿಂದ ಉತ್ತಮ ಪಠ್ಯಕ್ರಮವನ್ನು ನಿರೀಕ್ಷಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಈ ಸಮಿತಿಯನ್ನು ವಿಸರ್ಜಿಸಿರುವುದಾಗಿ ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದು, ಈ ಹಿಂದಿನ ಬರಗೂರು ರಾಮಚಂದ್ರಪ್ಪ ಸಮಿತಿ ನೀಡಿದ ಪಠ್ಯಪುಸ್ತಕವನ್ನು ಮಕ್ಕಳಿಗೆ ಓದಲು ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅರಣ್ಯಭೂಮಿ ಒತ್ತುವರಿ ಮಾಡಿಕೊಂಡು ಜೀವನ ನಡೆಸುತ್ತಿದ್ದವರನ್ನು ಒಕ್ಕಲೆಬ್ಬಿ ಸಲು ಮುಂದಾಗಿರುವ ಕ್ರಮ ಸರಿಯಲ್ಲ, ಜನರನ್ನು ಒಕ್ಕಲೆಬ್ಬಿಸದೆ ಅವರನ್ನು ಬದುಕಲು ಬಿಡಿ. ಜನರ ಜಮೀನು ಕಬಳಿಸಬೇಡಿ ಜನರ ಹಿತವನ್ನು ನೋಡಿ ಅವರಿಗೆ ಜಮೀನು ನೀಡಿ ಎಂದು ಆಗ್ರಹಿಸಿದರು.
ರಾಜ್ಯದಲ್ಲಿರುವ ಮೂರು ರಾಜಕೀಯ ಪಕ್ಷಗಳ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಜನತಾ ಪಾರ್ಟಿ ಭ್ರಷ್ಟಚಾರ ನಿರ್ಮೂಲನೆ ಮತ್ತು ಸರ್ವೋದಯ ಕಲ್ಪನೆಯನ್ನು ಇಟ್ಟು ಕೊಂಡು ಜನರ ಬದುಕು ಹಸನಾಗಿಲು ಶಕ್ತಿ ಮೀರಿ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಎಲ್.ಎಲ್. ಭೈರೇಗೌಡ ಮಾತನಾಡಿ, ರೈತರು ಇಂದು ಸಂಕಷ್ಟದಲ್ಲಿದ್ದು, ಕೃಷಿಯಿಂದ ವಿಮುಕ್ತರಾಗುತ್ತಿದ್ದಾರೆ. ನಮ್ಮನಾಳುವ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಲು ಮುಂದಾ ಗಿಲ್ಲ. ಜನತಾ ಪಾರ್ಟಿ ರೈತರ ಕಲ್ಯಾಣಕ್ಕಾಗಿ ಮುಂದಿನ ದಿನಗಳಲ್ಲಿ ಶ್ರಮಿಸಲಿದೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಸಿ.ರಾಜೇಂದ್ರ ಮಾತನಾಡಿ, ಅಡಕೆಗೆ ಹಳದಿ ಎಲೆ ರೋಗ ಸೇರಿದಂತೆ ಮಲೆನಾಡಿನ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಮೂರು ಪಕ್ಷಗಳು ಜನರನ್ನು ಭ್ರಮನಿರಸನಾಗಿಸಿದ್ದಾರೆ. ಈ ಎಲ್ಲಾ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜನತಾ ಪಾರ್ಟಿ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್, ರಾಜ್ಯ ಸದಸ್ಯತ್ವ ಸಮಿತಿ ಅಧ್ಯಕ್ಷ ಕೆ.ಎಂ.ಪಾಲಾಕ್ಷ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ರಜಿತ್ ಬೇಸೂರು, ರಾಜ್ಯ ಉಪಾಧ್ಯಕ್ಷ ಹೊನ್ನೇಗೌಡ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!