April 30, 2024

MALNAD TV

HEART OF COFFEE CITY

ಸಾಮಾನ್ಯ ಪ್ರವೇಶ ಪರೀಕ್ಷೆಯ ಸಿದ್ಧತೆಯ ಪೂರ್ವಭಾವಿ ಸಭೆ

1 min read

ಚಿಕ್ಕಮಗಳೂರು: ಜೂನ್ 16 ಮತ್ತು 17ರಂದು ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಯಾವುದೇ ಗೊಂದಲ, ಅನುಮಾನಗಳಿಗೆ ಆಸ್ಪದ ನೀಡದೇ ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಸಿದ್ಧತೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ನಗರದ ತಮ್ಮ ಕಚೇರಿಯಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂ ರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರತೀ ಪರೀಕ್ಷಾ ಕೊಠಡಿಗಳಲ್ಲಿ 24 ಅಭ್ಯರ್ಥಿಗಳನ್ನು ಇರಿಸಬೇಕು. ಪರೀಕ್ಷೆ ನಡೆಯುವ ವಿಷಯಗಳ ಪ್ರಾಧ್ಯಾಪಕರನ್ನು ಕೊಠಡಿ ಮೇಲ್ವಿಚಾರಕರಾಗಿ ನೇಮಿಸಿಕೊಳ್ಳಬಾರದು. ಎಲೆಕ್ಟ್ರಾನಿಕ್ ಉಪಕರಣಳನ್ನು ತರಲು ಅವಕಾಶ ನೀಡಬಾರದು. ಅಭ್ಯರ್ಥಿಗಳು ತುಂಬು ತೋಳಿನ ಅಂಗಿ ಹಾಗೂ ಆಭರಣಗಳನ್ನು ಧರಿಸಲು ಅವಕಾಶ ನೀಡಬಾರದು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅಭ್ಯರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಒಂದು ವೇಳೆ ಮಾಸ್ಕ್ ಧರಿಸಲು ಬಯಸಿದರೆ ಸರ್ಜಿಕಲ್ ಮಾಸ್ಕ್‍ಗಳನ್ನೇ ಬಳಸಬೇಕು. ಸ್ಯಾನಿಟೈಸರ್‍ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನೀಡಬೇಕು. ಆರೋಗ್ಯ ಸಹಾಯಕರನ್ನು ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿ ನಿಯೋಜಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಹಾಗೂ ಉತ್ತರ ಪತ್ರಿಕೆಗಳನ್ನು ಒಂದು ಗಂಟೆ ಮುಂಚಿ ತವಾಗಿ ತಲುಪಿಸಬೇಕು. ತಲುಪಿಸುವಾಗ ಹಾಗೂ ಪರೀಕ್ಷಾ ಕೇಂದ್ರಗಳಿಂದ ಅವು ಗಳನ್ನು ವರ್ಗಾವಣೆ ಮಾಡುವಾಗ ಪೊಲೀಸ್ ಬಂದೋಬಸ್ತ್‍ನಲ್ಲಿ ಸಾಗಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿರುವ ಪ್ರೌಢಶಾಲೆಗಳು, ಕಾಲೇಜುಗಳು ಮತ್ತು ಪರೀಕ್ಷೆ ನಡೆಯುವ ಕಾಲೇಜುಗಳಿಗೆ ಪರೀಕ್ಷೆ ದಿನಗಳಂದು ರಜೆ ನೀಡಬೇಕು. ಅವುಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲು ಆದೇಶ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಉಮೇಶ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯ್ಕ್, ಡಯಟ್ ಪ್ರಾಂಶುಪಾಲರಾದ ದಯಾವತಿ ಹಾಗೂ ಕಾಲೇಜು ಪ್ರಾಂಶುಪಾಲರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!