May 17, 2024

MALNAD TV

HEART OF COFFEE CITY

ಆದಿ ಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿವಿಧ ಕಾರ್ಯಕ್ರಮ: ಡಾ|ಸಿ.ಟಿ. ಜಯದೇವ.

1 min read

ಚಿಕ್ಕಮಗಳೂರು: ಜೂ.14ರಿಂದ 18ರ ವರೆಗೆ ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆದಿ ಚುಂಚನ ಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|ಸಿ.ಟಿ.ಜಯದೇವ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.14ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಉಡುಗೆ ದಿನ ಆಚರಿಸಲಾಗುತ್ತಿದೆ. ಜೂ.15 ರಂದು ಮೊದಲ ವರ್ಷದ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಪ್ರೋಗ್ರಾಮ್-2 ಏರ್ಪಡಿಸಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಲಿದ್ದಾರೆ ಎಂದರು.
ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ, ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಿವೃತ್ತ ನಿರ್ದೇಶಕ ಹಾಗೂ ಬರಹಗಾರ, ಚಿಂತಕ ಮತ್ತು ಶಿಕ್ಷಣತಜ್ಞ ಡಾ|ಕೆ.ಪಿ.ಪುತ್ತುರಾಯ, ಜಿ.ಪಂ. ಸಿಇಓ ಜಿ.ಪ್ರಭು, ಆದಿ ಚುಂಚನಗಿರಿ ಆಡಳಿತ ಮಂಡಳಿ ಸದಸ್ಯರು ಹಾಗೂ ನಿರ್ದೇಶಕರಾದ ಡಾ|ಸಿ.ಕೆ.ಸುಬ್ಬರಾಯ ಉಪಸ್ಥಿತರಿರಲಿದ್ದಾರೆ ಎಂದರು.
ಜೂ.16ರಂದು ವಿದ್ಯಾರ್ಥಿಗಳಿಗೆ ದೇಶದ ಸಂಸ್ಕøತಿ, ಮಾನವೀಯ ಮೌಲ್ಯಗಳ ಬಗ್ಗೆ ತಿಳು ವಳಿಕೆ ನೀಡಲಾಗುವುದು. ಅಂತಿಮ ವರ್ಷದ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭ ನಡೆಯಲಿದೆ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು. ಗುಣನಾಥ ಸ್ವಾಮೀಜಿ, ಮೈಸೂರು ವಿಶ್ವ ವಿದ್ಯಾಲಯದ ಉಪಕುಲಪತಿ ಡಾ|ಜಿ.ಹೇಮಂತ ಕುಮಾರ್, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಎನ್. ಎಸ್.ರಾಮೇಗೌಡ ಭಾಗವಹಿಸುವರು ಎಂದು ತಿಳಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವತಿಯಿಂದ ಜರುಗಿದ ಅಂತಿಮ ವರ್ಷದ ಪರೀಕ್ಷೆ ಯಲ್ಲಿ ರ್ಯಾಂಕ್‍ಗಳಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಚಿನ್ನದ ಪದಕ ಪ್ರಧಾನ ಮಾಡಲಾಗುವುದು. ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ ಆಡಳಿತ ಮಂಡಳಿ ಸದಸ್ಯರು ಹಾಗೂ ನಿರ್ದೇಶಕರಾದ ಡಾ|ಸಿ.ಕೆ.ಸುಬ್ಬರಾಯ, ಪ್ರಾಂಶುಪಾಲ ಡಾ|ಸಿ.ಟಿ.ಜಯ ದೇವ ಪಾಲ್ಗೊಳ್ಳುವರು ಎಂದರು.
ಜೂ.17 ಮತ್ತು 18ರಂದು ಮಹಾವಿದ್ಯಾಲಯ ಸಾಂಸ್ಕøತಿಕ ಉತ್ಸವ ಚುಂಚನ ಏರ್ಪಡಿಸಲಾ ಗಿದೆ. ಜೂ.17 ಶುಕ್ರವಾರ ಬೆಳಿಗ್ಗೆ 9:15ಕ್ಕೆ ಚುಂಚನ ಸಾಂಸ್ಕøತಿಕ ಉತ್ಸವ ಉದ್ಘಾಟನೆ ನಡೆಯ ಲಿದ್ದು, ಹಿರಿಯ ಉಪವಿಭಾಗಾಧಿಕಾರಿ ಡಾ|ಎಚ್.ಎಲ್.ನಾಗರಾಜ್ ಉದ್ಘಾಟಿಸುವರು. ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್ ಮತ್ತು ಸದಸ್ಯರು, ನಿರ್ದೇಶಕರಾದ ಡಾ|ಸಿ.ಕೆ.ಸುಬ್ಬರಾಯ ಹಾಗೂ ಪ್ರಾಂಶುಪಾಲ ಡಾ|ಸಿ.ಟಿ. ಜಯದೇವ ಉಪಸ್ಥಿತರಿರುವರು ಎಂದು ತಿಳಿಸಿದರು.
ಜೂ.7ರ ಸಂಜೆ 4:30ಕ್ಕೆ ಬಹುಮಾನ ವಿತರಣೆ ನಡೆಯಲಿದೆ. ಜಿ.ಪಂ. ಸಿಇಓ ಜಿ.ಪ್ರಭು, ಖ್ಯಾತ ಗಾಯಕ ವಾಸುಕಿ ವೈಭವ್ ಭಾಗವಹಿಸಲಿದ್ದಾರೆ. ಸಂಜೆ 6ಗಂಟೆಗೆ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಫ್ಯಾಶನ್ ಶೋ ಏರ್ಪಡಿಸಲಾಗಿದೆ ಎಂದರು.

ಜೂ.18ರ ಶನಿವಾರ 4:30ಕ್ಕೆ ಸಾಂಸ್ಕøತಿಕ ಉತ್ಸವ ಚುಂಚನ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಎಂ.ಎಚ್.ಅಕ್ಷಯ್ ಪಾಲ್ಗೊಳ್ಳಲಿದ್ದಾರೆ. ಸಾಂಸ್ಕøತಿಕ ಸ್ಫರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ ಹಾಗೂ ಸಂಜೆ 6ಗಂಟೆಗೆ ಮಹಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಹಾಗೂ ನಾಲ್ಕನೇಯ ಆಯಾಮ ಚಲನಚಿತ್ರ ತಂಡದ ನಿರ್ದೇಶಕರು, ನಟ, ನಟಿಯರು ಭಾಗವಹಿಸ ಲಿದ್ದಾರೆ ಎಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!