May 17, 2024

MALNAD TV

HEART OF COFFEE CITY

ಕೇಂದ್ರ ಸರ್ಕಾರ ಯೋಜನೆಗಳನ್ನು ಜನತೆಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಎಂ.ಕೆ.ಪ್ರಾಣೇಶ್

1 min read

 ಚಿಕ್ಕಮಗಳೂರು: ನರೇಂದ್ರ ಮೋದಿ ಅವರ 8 ವರ್ಷದ ಆಡಳಿತದಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಜನತೆಗೆ ಮುಟ್ಟಿಸುವ ಕೆಲಸವನ್ನು ಕಾರ್ಯ ಕರ್ತರು ಮಾಡಬೇಕು ಎಂದು ವಿಧಾನ ಪರಿಷತ್ ಶಾಸಕ ಎಂ.ಕೆ.ಪ್ರಾಣೇಶ್ ತಿಳಿಸಿದರು.ನಗರದ ಮಾರ್ಕೆಟ್ ರಸ್ತೆಯ ಓಂಶಕ್ತಿ ಸಮುದಾಯ ಭವನದಲ್ಲಿ ನಗರಮಂಡಲ ಜಗನ್ನಾಥ್ ರಾವ್ ಜೋಷಿ ಮಹಾಶಕ್ತಿ ಕೇಂದ್ರದಿಂದ ಸೇವಾ ಸುಶಾಸನ ಮತ್ತು ಬಡವರ ಕಲ್ಯಾಣ ಅಭಿ ಯಾನದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳೊಂದಿಗಿನ ಸಂವಾ ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಕಳೆದ 70 ವರ್ಷಗಳ ಆಡಳಿತಕ್ಕೂ ಇಂದಿನ 8 ವರ್ಷದ ಆಡಳಿತದಲ್ಲೂ ಯಾವ ರೀತಿ ದೇಶ ಅಭಿವೃದ್ಧಿಯತ್ತ ಸಾಗಿದೆ ಎಂಬುದನ್ನು ಹೋಲಿಕೆ ಮಾಡಿದಾಗ ಸ್ಪಷ್ಟತೆ ಅರಿವಿಗೆ ಬರಲಿದೆ. ಕಟ್ಟಕಡೆಯ ಫಲಾನುಭವಿಗಳಿಗೆ ಗಮನದಲ್ಲಿಟ್ಟುಕೊಂಡು ಯೋಜನೆಯನ್ನು ರೂಪಿ ಸಲಾಗಿದೆ. ಎಲ್ಲಾ ವರ್ಗದ ಹಿಂದಳಿದ ಸಮಾನ ಪ್ರಾತಿನಿಧ್ಯ ಕಲ್ಪಿಸಲಾಗಿದೆ ಎಂದರು.
ಶಾಸಕ ಸಿ.ಟಿ.ರವಿ ಚಿಕ್ಕಮಗಳೂರು ಮಾದರಿಯಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಗೆ ಮೆಡಿಕಲ್ ಕಾಲೇಜು ನಿರ್ಮಾಣ, ನೀರಾ ವರಿ ಯೋಜನೆಗಳು ಒಳಗೊಂಡಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಿಲ್ಲೆಗೆ ಒದಗಿಸುವಲ್ಲಿ ಶ್ರಮಿಸುತಿದ್ದಾರೆ. ಈ ಬಗ್ಗೆ ನಾವೆಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ, ನಗರ ಮಂಡಲ ಜಗನ್ನಾಥ್‍ರಾವ್ ಜೋಷಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಕುಮಾರ್, ಬಿಜೆಪಿ ನಗರಮಂಡಲ ಅಧ್ಯಕ್ಷ ಮಧು ಕುಮಾರ್ ರಾಜ್ ಅರಸ್, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಮಾಜಿ ಅಧ್ಯಕ್ಷ ರಾದ ಎಚ್.ಡಿ.ತಮ್ಮಯ್ಯ, ಮುತ್ತಯ್ಯ, ಮಾಜಿ ಸಿಡಿಎ ಅಧ್ಯಕ್ಷ ರಾಜಪ್ಪ, ಉಪಾಧ್ಯಕ್ಷರಾದ ಉಮಾದೇವಿ ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ನಗರಸಭೆ ಸದಸ್ಯರಾದ ರಾಜು, ವಿಫುಲ್‍ಕುಮಾರ್ ಜೈನ್, ನಾಮಿನಿ ಸದಸ್ಯ ರವಿ ಸೇರಿದಂತೆ ಅನೇಕರು ಇದ್ದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!