May 17, 2024

MALNAD TV

HEART OF COFFEE CITY

ಮೋದಿ ಆಡಳಿತದಲ್ಲಿ ಅಭಿವೃದ್ದಿ ಪರ್ವ: ಸಿ.ಟಿ.ರವಿ

1 min read

ಚಿಕ್ಕಮಗಳೂರು: ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ಬಳಿಕ ದೇಶದಲ್ಲಿ ಆಡಳಿತ ಸುಧಾರಣೆ ಪರ್ವ, ಅಭಿವೃದ್ಧಿ ಪರ್ವ ಹಾಗೂ ಅಂತ್ಯೋದಯ ಯುಗ ಆರಂ ಭವಾಗಿದೆ ಎಂದು ಶಾಸಕ ಸಿ.ಟಿ.ರವಿ ಅವರು ಬಣ್ಣಿಸಿದರು. ನಗರದ ಬೋಳರಾಮೇಶ್ವರ ದೇವಸ್ಥಾನ ಆವರಣ ಗಣಪತಿ ಪೆಂಡಲ್‍ನಲ್ಲಿ ಬಿಜೆಪಿ ಪಂಡಿತ್ ದೀನದಯಾಳ್ ಉಪಧ್ಯಾಯ ಮಹಾಶಕ್ತಿ ಕೇಂದ್ರ ಹಮ್ಮಿಕೊಂಡಿದ್ದ ಸುಶಾಸನ ಮತ್ತು ಬಡವರ ಕಲ್ಯಾಣ ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿ ಯೊಂದಿಗೆ ಸಂವಾದವನ್ನು ಉದ್ಘಾಟಿಸಿ ಮಾತನಾಡಿದರು.
ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿನ ಸಾಧನೆ ಮತ್ತು ಸವಾಲುಗಳನ್ನು ಈ ಕಾರ್ಯಕ್ರಮದ ಮೂಲಕ ಜನತೆ ಮುಂದಿಡುವ ಕೆಲಸವನ್ನು ಮಾಡಲಾಗುತ್ತಿದೆ. 350ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ನೀಡಿದ್ದು, ಈ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಿಳಿಸಿಕೊಡುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.
8ವರ್ಷಗಳ ಆಡಳತಾವಧಿಯಲ್ಲಿ ನರೇಂದ್ರ ಮೋದಿ ಅವರು ಆಡಳಿತದಲ್ಲಿ ಸುಧಾರಣೆ ತಂದರು. ಈ ಹಿಂದೇ ಕೇಂದ್ರ ಸರ್ಕಾರದಿಂದ 100 ರೂ. ಬಿಡುಗಡೆಯಾದರೇ, ಫಲಾ ನುಭವಿಗೆ 15ರೂ. ತಲುಪುತ್ತಿತ್ತು. ಈಗ ಕಾಲ ಬದಲಾಗಿದೆ. ಪೂರ್ಣ ಹಣ ಫಲಾನುಭವಿ ಖಾತೆಗೆ ನೇರವಾಗಿ ಹಾಕಲಾಗುತ್ತದೆ. ಇದರಿಂದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರ ಸೌಲಭ್ಯ ದೊರೆಯುತ್ತಿದೆ ಎಂದು ತಿಳಿಸಿದರು.

ಜನಧನ್ ಯೋಜನೆ, ಕಿಸಾನ್ ಸನ್ಮಾನ್ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ, ಓನ್ ಇಂಡಿಯಾ ಒನ್ ರೇಷನ್, ಜಿಎಸ್‍ಟಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ, 138 ಕೋಟಿ ಜನರಿಗೆ ಉಚಿತ ವ್ಯಾಕ್ಸಿನ್ ಹೀಗೆ ಅನೇಕ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ನೀಡಿದೆ ಇಷ್ಟೇಲ್ಲ ಸೌಲಭ್ಯವನ್ನು ಪಡೆದುಕೊಂಡು ಮೋದಿಗೆ ಓಟು ನೀಡಲ್ಲ ಎನ್ನುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಜಿಲ್ಲಾ ಕೇಂದ್ರದಲ್ಲಿ 630 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 1511 ಜಿ ಪ್ಲೇಸ್ ವಸತಿ ಹಾಗೂ 800 ಮನೆಗಳ ನಿರ್ಮಾಣವಾಗುತ್ತಿದೆ. ಚಿಕ್ಕಮಗಳೂರು ನಗರ ಅಭಿವೃದ್ಧಿ ಪಥದಲ್ಲಿ ಸಾಗು ತ್ತಿದೆ. ವಿರೋಧ ಪಕ್ಷದವರು ನಾವು ರೈತವಿರೋಧಿ, ಜನವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಇಷ್ಟೇಲ್ಲಾ ನೀಡಿದ ಮೇಲೆ ನಾವು ರೈತವಿರೋಧಿ, ಜನ ವಿರೋಧಿಯಾಗಲು ಸಾಧ್ಯವೇ ಎಂದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಪ್ರತಿಯೊಬ್ಬರಿಗೂ ಉಚಿತ ಅಕ್ಕಿ ನೀಡಲಾಗುತ್ತಿದೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕಾರ ಕಳೆದು ಕೊಂಡು 4ವರ್ಷ ಕಳೆದರು ನಾನು ಅಕ್ಕಿಕೊಟ್ಟೇ, ನಾನೇ ನಾನೇ ಎಂದು ಎದೆಬಡಿದುಕೊಳ್ಳು ತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೋದಿ ನೇತೃತ್ವದ 8ವರ್ಷ ಆಡಳಿತದ ರಿರ್ಪೋಟ್ ಕಾರ್ಡ್ ನಿಮ್ಮ ಮುಂದಿಟ್ಟಿದ್ದೇವೆ. ಈ ರಿರ್ಪೋಟ್ ಕಾರ್ಡ್ ಇಟ್ಟುಕೊಂಡು ಜನತೆಯಲ್ಲಿ ಜಾಗೃತಿ ಮೂಡಿಸುವ ಕೆಲಸ ಕಾರ್ಯ ಕರ್ತರು ಮಾಡಬೇಕು. 2023ರ ರಿರ್ಪೋಟ್ ಕಾರ್ಡ್ ನಿಮ್ಮ ಮುಂದಿಟ್ಟು ನಿಮ್ಮ ಮುಂದೇ ಓಟ್ ಕೇಳಲು ಬರುತ್ತೇವೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮುರಡಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, 8 ವರ್ಷಗಳಲ್ಲಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಭ್ರಷ್ಟಚಾರ ರಹಿತ ಆಡಳಿತವನ್ನು ನೀಡಿದೆ. ಬಡವರ ಕಲ್ಯಾಣಕ್ಕಾಗಿ ಕೆಲಸ ಮಾಡಿದೆ. ಜನಪರ ಯೋಜನೆಗಳ ವಿವರಗಳನ್ನು ಪ್ರತೀ ಮನೆಗೆ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಮಧುಕುಮಾರ್ ರಾಜ್ ಅರಸ್, ದೇವರಾಜ್ ಶೆಟ್ಟಿ, ಕೋಟೆ ರಂಗನಾಥ್, ಬಿ.ರಾಜಪ್ಪ, ಮಂಜುನಾಥ್ ರಾಜ್ ಅರಸ್, ಪುಷ್ಪಾರಾಜ್, ವೀಣಾ ಶೆಟ್ಟಿ, ನಗರಸಭೆ ಸದಸ್ಯರಾದ ಟಿ.ರಾಜಶೇಖರ್, ರೂಪ, ವಿಫುಲ್‍ಕುಮಾರ್ ಜೈನ್ ಸೇರಿ ದಂತೆ ಅನೇಕರು ಇದ್ದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!