May 17, 2024

MALNAD TV

HEART OF COFFEE CITY

ಸಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ರಮಾನಾಥ ರೈ

1 min read

ಚಿಕ್ಕಮಗಳೂರು: ಸಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳು ತ್ತಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ ಮತ್ತು ರಾಹುಲ್‍ಗಾಂಧಿ ಅವರಿಗೆ ಇ.ಡಿ. ವಿಚಾರಣೆ ನೆಪದಲ್ಲಿ ಕಿರುಕುಳ ನೀಡಿ ಅವರ ಹೆಸರು ಕುಗ್ಗಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ದೂರಿದರು.ನೆಹರು ಕುಟುಂಬದವರು ದೇಶಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿದ್ದಾರೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಪ್ರಾಣತ್ಯಾಗ ಮಾಡಿದ್ದಾರೆ. ಅಂತಹ ಕುಟುಂಬಕ್ಕೆ ದುರುದ್ದೇಶದಿಂದ ಇ.ಡಿ. ವಿಚಾರಣೆ ಹೆಸರಿನಲ್ಲಿ ಕಿರುಕುಳ ನೀಡಿ ಅಪಮಾನ ಮಾಡಲಾಗು ತ್ತಿದೆ ಎಂದರು.
ಇ.ಡಿ., ಐಟಿ, ಸೇರಿದಂತೆ ಇತರೆ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳ ಮುಖಂಡರ ಮನೆಗಳ ಮೇಲೆ ಹಾಗೂ ಚುನಾವಣೆ ಸಂದರ್ಭದಲ್ಲಿ ದಾಳಿಗಳನ್ನು ನಡೆಸಲಾಗುತ್ತದೆ. ವಿರೋಧ ಪಕ್ಷಗಳನ್ನು ಮಾತ್ರ ಏಕೆ ಟಾರ್ಗೇಟ್ ಮಾಡ ಲಾಗುತ್ತಿದೆ ಎಂದು ಪ್ರಶ್ನಿಸಿದರು.ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಇ.ಡಿ. ತನಿಖೆ ನಡೆಸಿ ನ್ಯಾಯಾಲಯದಲ್ಲಿ ಪ್ರಕರಣ ಖುಲಾಸೆಯಾಗಿದೆ. ದುರುದ್ದೇಶದಿಂದ ಬಿಜೆಪಿ ಸರ್ಕಾರ ಇ.ಡಿ. ಸಂಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮರುತನಿಖೆ ನಡೆಸಲು ಮುಂದಾಗಿ ಕಾಂಗ್ರೆಸ್ ಪಕ್ಷದ ಹೆಸರು ಕುಗ್ಗಿಸುವ ಮತ್ತು ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಜನತೆ ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದರು. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಚಾರ ಆರೋಪ ಹೊತ್ತ ಮಂತ್ರಿಗಳು ಮತ್ತು ಮುಖಂಡರು ಸೋನಿಯಾಗಾಂಧಿ ಮತ್ತು ರಾಹುಲ್‍ಗಾಂಧಿಯವರ ಇ.ಡಿ.ತನಿಖೆ ಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಚಾರ ನಡೆಸಿದವರು ಸಮರ್ಥನೆ ನೀಡುತ್ತಿರುವು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆಯನ್ನು ಜಾರಿಗೊಳಿಸುವ ಮೂಲಕ ದೇಶದ ಯುವ ಜನತೆಗೆ ಮೋಸ ಮಾಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಗಳನ್ನು ಖಂಡಿಸಿ ಜನರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯವರಿಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನಾ ನೀಡಿದ ಯಾವ ಭರವಸೆಗಳನ್ನು ಇದುವರೆಗೂ ಈಡೇರಿಸಿಲ್ಲ. ಬೆಲೆಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡಲಾಗುತ್ತಿದೆ. ದೇಶದಲ್ಲಿ ನೀರುದ್ಯೋಗ ಸೇರಿದಂತೆ ಇತರೆ ಗಂಭೀರ ಸಮಸ್ಯೆ ಗಳನ್ನು ಜನತೆ ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಶೇ.40 ಕಮಿಷನ್ ಸರ್ಕಾರ ಇದೆ. ಮಠ ಮಾನ್ಯಗಳಿಗೆ ಸರ್ಕಾರ ಹಣ ನೀಡಲು ಶೇ.60ರಷ್ಟು ಕಮಿಷನ್ ನೀಡಬೇಕೆಂದು ಸ್ವಾಮೀಜಿಗಳು ಆರೋಪಿಸಿದ್ದಾರೆ. ಶಾಸಕ ಸಿ.ಟಿ.ರವಿ ಅವರ ಯೋಗ್ಯತೆಗೆ ಅನುಸಾರವಾಗಿ ಮಾತನಾಡದೇ, ಕಾಂಗ್ರೆಸ್ ಮುಖಂಡರನ್ನು ದೂರು ವುದರಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮೂರು ತಿಂಗಳು ಕಳೆದರೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೇಮಕವಾಗಿಲ್ಲ. ಕಸ್ತೂರಿ ರಂಗನ್ ವರದಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಡೀಮ್ಡ್ ಫಾರೆಸ್ಟ್ ಪ್ರಕರಣ ನ್ಯಾಯಾಲಯದಲ್ಲಿದೆ. 6ಲಕ್ಷ ಹೆಕ್ಟೇರ್ ಪ್ರದೇಶ ಕಂದಾಯ ಇಲಾಖೆಗೆ ವರ್ಗಾಯಿಸು ವುದಾಗಿ ಸುಳ್ಳು ಹೇಳುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ|ಕೆ.ಪಿ.ಅಂಶುಮಂತ್, ಡಾ|ಡಿ.ಎಲ್. ವಿಜಯ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಹಿರೇಮಗಳೂರು ಪುಟ್ಟ ಸ್ವಾಮಿ, ಸಿಡಿಎ ಮಾಜಿ ಅಧ್ಯಕ್ಷ ಸೈಯದ್ ಹನೀಫ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!