May 19, 2024

MALNAD TV

HEART OF COFFEE CITY

ಉದ್ಯಮಕ್ಕೆ ಅವಶ್ಯಕವಿರುವ ಕೌಶಲ್ಯಗಳ ಕೊರತೆಯಿಂದ ಉದ್ಯೋಗವಕಾಶ ಕುಂದುತ್ತಿದೆ : ಡಿಸಿ ರಮೇಶ್

1 min read

ಚಿಕ್ಕಮಗಳೂರು: ಕೈಗಾರಿಕೆ ಉದ್ಯಮಗಳಿಗೆ ಅವಶ್ಯವಿರುವ ಕೌಶಲ್ಯ ಕೊರತೆ ಇರುವುದರಿಂದ ಉದ್ಯೋಗವಕಾಶಗಳು ಕುಂದುತ್ತಿವೆ. ಈ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಿ ಕೌಶಲ್ಯ ಅಂತರವನ್ನು ಹೋಗಲಾಡಿಸಿ ಉದ್ಯೋಗ ಸೃಜನಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.
ನಗರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಟಿ.ಟಿ.ಎಲ್ ಸಹಯೋಗದೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ತಾಂತ್ರಿಕ ಕೇಂದ್ರವ ನ್ನಾಗಿ ಉನ್ನತೀಕರಿಸಲಾಗಿರುವ ಚಿಕ್ಕಮಗಳೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಟಾಟಾ ಟೆಕ್ನಾಲಜೀಸ್ ಮತ್ತು ಇನ್ನಿತರ 20 ಉದ್ಯಮ ಪಾಲುದಾರರ ಸಹಯೋಗದೊಂದಿಗೆ ರಾಜ್ಯದಲ್ಲಿ 4,636 ಕೋಟಿ ರೂ. ವೆಚ್ಚದಲ್ಲಿ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸಲಾಗುತ್ತಿದೆ. ರಾಜ್ಯ ಸರ್ಕಾರವು 657 ಕೋಟಿ ರೂ. ನೀಡಿದ್ದು, ಉಳಿದ ಹಣ ವನ್ನು ಖಾಸಗಿ ಸಂಸ್ಥೆಗಳು ಭರಿಸುತ್ತಿವೆ ಎಂದರು.
ಆಧುನಿಕ ತಂತ್ರಜ್ಞಾನವನ್ನು ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ಅಳವಡಿಸಿ ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ನೂತನ ಕೈಗಾರಿಕಾ ನೀತಿ ಅನ್ವಯ ಕೈಗಾರಿಕೆ 4.0 ಯೋ ಜನೆ ಜಾರಿಗೆ ತರಲಾಗಿದ್ದು, ಜಿಲ್ಲೆಯಲ್ಲಿರುವ 9 ಸರ್ಕಾರಿ ಐಟಿಐ ಗಳಲ್ಲಿ 5 ಐಟಿಐಗಳನ್ನು ಉನ್ನತೀಕರಿಸಲಾಗಿದೆ ಎಂದರು.

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ದೇಶದ ಅಭಿವೃದ್ಧಿ ಹಾಗೂ ಯುವಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ದೃಷ್ಟಿಯಿಂದ ಕೈಗಾರಿಕೆ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿ ಸಿಕೊಂಡು ಮುಂದೆ ಸ್ವ-ಉದ್ಯಮ ಅಥವಾ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ಸಶಕ್ತ ರಾಗಬೇಕು ಎಂದರು.
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ತಾಂತ್ರಿಕ ಕೇಂದ್ರವನ್ನಾಗಿ ಉನ್ನತಿಕರಿಸಲಾಗಿರುವ ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗಳ ಲೋಕಾರ್ಪಣೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ವರ್ಚುವಲ್ ಮೋಡ್ ಮೂಲಕ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪೊ ಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್, ಚಿಕ್ಕಮಗಳೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಎ.ಎಸ್.ಪ್ರಕಾಶ್, ನಿರ್ಮಿತಿ ಕೇಂದ್ರ ಯೋಜನಾ ವ್ಯವಸ್ಥಾಪಕ ವೈ.ಗಂಗಾ ಧರ್ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಸಿ.ಪ್ರಶಾಂತ ಮತ್ತಿತ್ತರ ಅಧಿಕಾರಿ ಗಳು ಇದ್ದರು. ಚಿಕ್ಕಮಗಳೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಿರಿಯ ತರಬೇತಿ ಅಧಿಕಾರಿ ಉಮೇಶ್ ನಿರೂಪಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!