May 2, 2024

MALNAD TV

HEART OF COFFEE CITY

ಸಾಂಕ್ರಾಮಿಕ ರೋಗಗಳ ತಡೆ ಗಟ್ಟುವ ಬಗ್ಗೆ ಜನಜಾಗೃತಿ

1 min read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ರೋಗಗಳ ತಡೆ ಗಟ್ಟುವ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಉಮೇಶ್ ತಿಳಿಸಿದರು.ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ 16 ಡೆಂಗ್ಯೂ ಪ್ರಕರಣಗಳು ಸೇರಿದಂತೆ ಈ ವರ್ಷದಲ್ಲಿ 29 ಪ್ರಕರಣಗಳು ಕಾಣಿಸಿಕೊಂಡಿವೆ. ಚಿಕ್ಕಮಗಳೂರು 10, ತರೀಕೆರೆ 4, ಕಡೂರು 2 ಪ್ರಕರಣ ಪತ್ತೆಯಾಗಿದ್ದು, ಮಲೇರಿಯಾ 1, ಚಿಕೂನ್‌ಗುನ್ಯಾ 6 ಪ್ರಕರಣ ಪತ್ತೆಯಾಗಿದ್ದು ತರೀಕೆರೆ 5, ನರಸಿಂಹ ರಾಜಪುರ ತಾಲ್ಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ ಎಂದು ಹೇಳಿದರು.

ಸಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಲ್ಲುಕ್ವಾರಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲಾಗುತ್ತಿದೆ. ಬಸ್‌ಡಿಪೋಗಳಲ್ಲಿ ಟೈರ್‌ಗಳಲ್ಲಿ ನೀರು ಸಂಗ್ರಹವಾಗದ0ತೆ ಎಚ್ಚರವಹಿಸಲು ಅಧಿಕಾರಿ ಗಳಿಗೆ ಸೂಚಿಸಲಾಗಿದೆ.
ಮನೆ ಬಳಿ ತೆಂಗಿನ ಚಿಪ್ಪಿನಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ, ವಾರಗಟ್ಟಲೇ ನೀರು ಸಂಗ್ರಹಿಸಿಟ್ಟುಕೊಳ್ಳದೇ ಬದಲಾವಣೆ ಮಾಡುವಂತೆ ಮತ್ತು ಮುಚ್ಚಳವನ್ನು ಮುಚ್ಚುವಂತೆ ಆರೋಗ್ಯ ಸಿಬ್ಬಂದಿ ಮನೆ ಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಶೃoಗೇರಿ ಪಟ್ಟಣದಲ್ಲಿ 100 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳು ಪರ್ಯಾಯ ಜಾಗ ಗುರುತಿಸಿದ್ದಾರೆ. ಆರೋಗ್ಯ ಇಲಾಖೆಗೆ ಜಾಗವನ್ನು ಹಸ್ತಾಂತರಿಸಿದ ನಂತರ ಕಟ್ಟಡ ನಿರ್ಮಾಣ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಮೂಡಿಗೆರೆ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆ ಇಲ್ಲ. ಕಳಸ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ಈ ಕೇಂದ್ರಕ್ಕೆ 6ವರ್ಷ ಸೇವೆಸಲ್ಲಿಸಿದ ವೈದ್ಯರನ್ನು ನೇಮಕ ಮಾಡಲಾಗುವುದು. ಸದ್ಯ ಮೂಡಿಗೆರೆ ಆಸ್ಪತ್ರೆಯಿಂದ ವೈದ್ಯರೊಬ್ಬರು ವಾರಕ್ಕೆ 2 ದಿನ ಹಿರೇಬೈಲು, ನಿಡುವಾಳೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!