May 5, 2024

MALNAD TV

HEART OF COFFEE CITY

ಕೆಲಸ ಮುಗಿಸಿ ಹೋಗುವಾಗ ಕಾಡಾನೆ ದಾಳಿ, ವ್ಯಕ್ತಿ ಪಾರು

1 min read

 

ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿದ್ದು ಆತ ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆಯ ಎಂ.ಐ.ಎಸ್.ಎಲ್. ನಲ್ಲಿ ಕೆಲಸ ಮಾಡುತ್ತಿದ್ದ ಸತ್ತಿಗನಹಳ್ಳಿ ಗ್ರಾಮದ ಪ್ರಭಾಕರ್ ರಾತ್ರಿ ಕೆಲಸ ಮುಗಿಸಿ 9 ಗಂಟೆಗೆ ಬೈಕಿನಲ್ಲಿ ಹಿಂದಿರುಗುವಾಗ ಕಾಡಾನೆ ದಾಳಿ ಮಾಡಿದೆ. ಪ್ರಭಾಕರ್ ಕೂಡಲೇ ಬೈಕನ್ನ ಅಲ್ಲೇ ಬಿಟ್ಟು ಓಡಿ ಹೋಗಿ ಸಾವಿನಿಂದ ಪಾರಾಗಿದ್ದಾರೆ. ಆನೆ ದಾಳಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ಆನೆ ದಾಳಿಯಿಂದ ಪ್ರಭಾಕರ್ ಕಾಲು, ತಲೆಗೆ ತೀವ್ರ ಪೆಟ್ಟಾಗಿದ್ದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪ್ರಭಾಕರ್ ಆರೋಗ್ಯ ವಿಚಾರಿಸಿದ್ದಾರೆ

 

 

 

 

ಬಳಿಕ ಅರಣ್ಯ ಅಧಿಕಾರಿಗಳು ಆನೆ ದಾಳಿ ಮಾಡಿದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಿಯರು ಅರಣ್ಯ ಇಲಾಖೆ ಕೂಡಲೇ ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಆಗ್ರಹಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಾರಗೋಡು, ಊರಬಗೆ, ಕೋಗಿಲೆ, ಜನ್ನಾಪುರ, ಗುತ್ತಿ ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ದಶಕಗಳಿಂದಳೂ ಕಾಡಾನೆ ಹಾವಳಿ ಇದೆ. ರೈತರು ಆನೆ ಹಾವಳಿಯಿಂದ ಮನೆ-ಮಠ, ಜೀವವನ್ನೂ ಕಳೆದುಕೊಂಡಿದ್ದಾರೆ. ಹಾಗಾಗಿ, ಅರಣ್ಯ ಇಲಾಖೆ ಕೂಡಲೇ ಕಾಡಾನೆಯನ್ನ ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಆಗ್ರಹಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!