May 18, 2024

MALNAD TV

HEART OF COFFEE CITY

ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ, ಯುವಕ‌ ಸಾವು

1 min read

 

ನಿಂತಿದ್ದ ಟ್ರ್ಯಾಕ್ಟರ್ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಕೆ.ಎಸ್.ಆರ್.ಟಿ.ಸಿ ಡಿಪೋ ಬಳಿ ನಡೆದಿದೆ. ಮೃತನನ್ನ 24 ವರ್ಷದ ರಕ್ಷಿತ್ ಎಂದು ಗುರುತಿಸಲಾಗಿದೆ. ಮೃತ ರಕ್ಷಿತ್ ಬಣಕಲ್ ಕಡೆಯಿಂದ ಬೈಕಿನಲ್ಲಿ ಗೋಣಿಬೀಡು ಕಡೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

ಈ ಅವಘಡಕ್ಕೆ ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದೆ. ಟ್ರ್ಯಾಕ್ಟರ್ ಚಾಲಕ ಟ್ರ್ಯಾಕ್ಟರನ್ನ ರಸ್ತೆ ಮಧ್ಯೆ ನಿಲ್ಲಿಸಿದ್ದರಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ರಸ್ತೆ ಮಧ್ಯೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಬೈಕ್ ಡಿಕ್ಕಿಯಾಗುತ್ತಿದ್ದಂತೆ ಯುವಕನ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ಕೂಡಲೇ ಆತನನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ತಲೆಗೆ ಗಂಭೀರ ಗಾಯವಾಗಿದ್ದ ಕಾರಣ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ಗೋಣಿಬೀಡು ಸಮೀಪದ ಲಕ್ಷ್ಮಿಪುರ ಗ್ರಾಮದ ರಾಮುರವರ ಪುತ್ರ ಎಂದು ತಿಳಿದುಬಂದಿದೆ. 24 ವರ್ಷದ ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!