May 15, 2024

MALNAD TV

HEART OF COFFEE CITY

ಕಟ್ಟಡ ಕಾರ್ಮಿಕರ ಕಿಟ್ ವಿತರಣೆ-ಅಕ್ರಮದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ ಮತ್ತಿತರೆ ಸೌಲಭ್ಯಗಳ ಪೂರೈಕೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಕಾರ್ಮಿಕ ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
 ನಗರದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮುಖಂಡ ರು ಮತ್ತು ಕಾರ್ಯಕರ್ತರು ಕಾರ್ಮಿಕ ಇಲಾಖೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಜಿ.ರಘು, ಮಾತನಾಡಿ, ಕೊರೊನಾ ಸಂದರ್ಭ ದಲ್ಲಿ ಕೆಲವೇ ವರ್ಗದ ಕಾರ್ಮಿಕರಿಗೆ ಮಾತ್ರ ಸಾಮಾಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾ ಗಿದೆ. ಅದೂ ಸಹ ಸಂಪೂರ್ಣ ಕಳಪೆಯಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪರಿಷ್ಕೃತಗೊಂಡಿರುವ ನಿವೃತ್ತಿವೇತನ, ಮದುವೆ, ಹೆರಿಗೆ ಭತ್ಯೆ, ವಿದ್ಯಾರ್ಥಿ ವೇತನ ಇನ್ನಿತರೆ ಹೆಚ್ಚುವರಿಯಾಗಿರುವ ಸಹಾಯಧನ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿ ವೇತನ ಸೇವಾ ಸಿಂಧುವಿನಲ್ಲಿ ಸುಲಭವಾಗಿ ಸಿಗುತ್ತಿತ್ತು. ಈಗ ಎಸ್‌ಎಸ್‌ಪಿ ಎನ್ನುವ ಪೋರ್ಟಲ್ ಮಾಡಿರುವುದರಿಂದ ತಾರತಮ್ಯಕ್ಕೆ ದಾರಿ ಮಾಡಿ ಕೊಟ್ಟಂತಾಗಿದೆ. ಇಬ್ಬರು ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ ಒಂದು ಮಗುವಿಗೆ ಮಾತ್ರ ನೆರವು ಸಿಗು ತ್ತಿದೆ. ಮತ್ತೊಂದು ಮಗುವಿಗೆ ಈಗ, ಆಗ ಎನ್ನುವ ಸಬೂಬುಗಳನ್ನು ಹೇಳಲಾಗುತ್ತಿದೆ ಎಂದು ದೂರಿದರು.
ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಸಾಮಾಗ್ರಿ ಸಂಪೂರ್ಣ ಕಳಪೆಯ್ದದ್ದಾಗಿದೆ. ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಾರ್ಮಿಕ ಮಂಡಳಿಯಲ್ಲಿರುವ ಅನುದಾನವನ್ನು ಅನಾ ವಶ್ಯಕವಾಗಿ ಖರ್ಚು ಮಾಡಿ, ದುಂದುವೆಚ್ಚ ಮಾಡಲಾಗುತ್ತಿದೆ. ಕಟ್ಟಡ ಕಾರ್ಮಿಕರಲ್ಲಿ 51 ವರ್ಗವಿದೆ. ಆದರೆ ಅದರಲ್ಲಿ 4ವರ್ಗಕ್ಕೆ ಮಾತ್ರ ಸೌಲತ್ತುಗಳನ್ನು ನೀಡಲಾಗುತ್ತಿದೆ. ಉಳಿ ದವರಾರು ಕಾರ್ಮಿಕರಲ್ಲವೇ ಎಂದು ಪ್ರಶ್ನಿಸಿದರು.

ಕಾರ್ಮಿಕರ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐಗೆ ಮ್ಯಾಪಿಂಗ್ ಮಾಡಿಕೊಡಲು ಬ್ಯಾಂಕುಗಳಿಗೆ ನಿರ್ದೇಶನ ನೀಡಬೇಕು. ನೈಜ ಕಾರ್ಮಿಕರಲ್ಲದವರ ಕಾರ್ಡುಗಳನ್ನು ಕೂಡಲೇ ರದ್ದುಪಡಿಸಬೇಕು. ಕಾರ್ಮಿಕರ ನೋಂದಣಿಯನ್ನು ಸೇವಾ ಸಿಂಧುವಿಗೆ ನೀಡದೇ ಹಿಂದಿನ ರೀತಿ ಇಲಾಖೆ ಮುಖಾಂತರವೇ ಮಾಡಿಸಬೇಕು ಎಂದು ಒತ್ತಾಯಿಸಿದರು.
ಮನೆ ನಿರ್ಮಿಸಿಕೊಳ್ಳಲು 5ಲಕ್ಷ ರೂ. ಸಹಾಯಧನ, ಉಚಿತ ಆರೋಗ್ಯ ಚಿಕಿತ್ಸೆ, ಕಾರ್ಮಿಕರಿಗೆ ಭವಿಷ್ಯ ನಿಧಿ ಜಾರಿ ಮಾಡಬೇಕು, ಅಪಘಾತ ವಿಮೆ, ಮಂಡಳಿ ಅನುದಾನದಲ್ಲಿ ಶಿಶುಪಾಲ ನಾ ಕೇಂದ್ರ ನಿರ್ಮಾಣ ಮಾಡಬಾರದು, ಕಾರ್ಮಿಕ ಮಂಡಳಿಯಲ್ಲಿ ಎಐಟಿಯುಸಿ ಪ್ರತಿನಿಧಿ ಗಳಿಗೆ ಸದಸ್ಯ ನೀಡಬೇಕು, ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಕೂಡಲೇ ಪರಿಹಾರ ವಿತರಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಸಿ.ವಸಂತಕುಮಾರ್, ಪ್ರಧಾನ ಕಾರ್ಯದರ್ಶಿ ಎ.ಜಯ ಕುಮಾರ್, ಸಿ.ಸಿ.ಮಂಜೇಗೌಡ, ಕುಪ್ಪನ್, ಮೋಹ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!