May 2, 2024

MALNAD TV

HEART OF COFFEE CITY

ಪ್ರವೀಣ್ ಹತ್ಯೆ ಖಂಡಿಸಿ ಕೊಪ್ಪ ಬಂದ್ ಯಶಸ್ವಿ

1 min read

 

ಚಿಕ್ಕಮಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯನ್ನ ಖಂಡಿಸಿ ಕರೆ ನೀಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೆಳಗ್ಗೆಯಿಂದಲೂ ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಕೊಪ್ಪ ಪಟ್ಟಣ ಸಂಪೂರ್ಣ ಸ್ಥಬ್ಧವಾಗಿತ್ತು. ಪ್ರತಿಭಟನೆ ವೇಳೆ ಕೊಪ್ಪದಲ್ಲಿ ಟೈರಿಗೆ ಬೆಂಕಿ ಹಾಕಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಅಂಗಡಿ ಮುಂಗಟ್ಟುಗಳನ್ನ ಮುಚ್ಚುವ ಮೂಲಕ ವರ್ತಕರು ಕೂಡ ಬಂದ್‍ಗೆ ಬೆಂಬಲ ನೀಡಿದ್ದರು. ಹಾಲು, ಔಷಧಿ ಅಂಗಡಿಗಳನ್ನ ಹೊರತುಪಡಿಸಿ ಉಳಿದ ಅಂಗಡಿಗಳು ಬಂದ್ ಆಗಿದ್ದವು. ಖಾಸಗಿ ವಾಹನಗಳು ಮತ್ತು ಆಟೋಗಳು ಕೂಡ ರಸ್ತೆಗಿಳಿದಿರಲಿಲ್ಲ. ಬಂದ್ ವಿಷಯ ತಿಳಿಯದವರು ಕೊಪ್ಪ ಪಟ್ಟಣಕ್ಕೆ ಬಂದು ಪ್ರಯಾಣಕ್ಕೆ ಪರದಾಡಬೇಕಾಯಿತು.

ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಕೊಪ್ಪ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಸ್ತೆಯಲ್ಲಿ ಟೈರ್‍ಗೆ ಬೆಂಕಿ ಹಾಕಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ. ಮೆರವಣಿಗೆ ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಯುವ ಮೋರ್ಚಾದ ಮುಖಂಡ ರಾಕೇಶ್ ಹಿರೇಕೂಡಿಗೆ, ಹಿಂದೂಗಳು ಒಗ್ಗೂಡದಿದ್ದರೆ ಮುಂದಿನ ದಿನಗಳಲ್ಲಿ ಉಳಿಗಾಲವಿಲ್ಲವೆಂದು ಎಚ್ಚರಿಸಿ, ಬಿಜೆಪಿ ಆಡಳಿತದಲ್ಲೇ ಪಕ್ಷದ ಕಾರ್ಯಕರ್ತರಿಗೆ ಈ ಗತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಕ್ಕೆ ಇತಿಶ್ರೀ ಹಾಡಲು ರಾಜ್ಯ ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!