May 2, 2024

MALNAD TV

HEART OF COFFEE CITY

ಕಾಫಿನಾಡಲ್ಲಿ ಮಳೆ ಅಬ್ಬರ, ಒಂದೇ ದಿನ ಮೂರು ಅಪಘಾತ

1 min read

 

ಚಿಕ್ಕಮಗಳೂರು. ಕಾಫಿನಾಡ ಮಲೆನಾಡು ಭಾಗದಲ್ಲಿ ಕಳೆದ ರಾತ್ರಿಯಿಂದ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ವಾಹನಗಳನ್ನ ಓಡಿಸಲು ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಮೂರು ಕಾರುಗಳ ಅಪಘಾತ ಸಂಭವಿಸಿವೆ. ಮೂಡಿಗೆರೆ ತಾಲೂಕಿನ ಬಣಕಲ್‍ನಲ್ಲಿ ಬಳಿ ಭಾರೀ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಕೇರಳ ಮೂಲದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನೂ ಕೊಪ್ಪ ತಾಲೂಕಿನ ಜಯಪುರ ಸಮೀಪದ ಶಾಂತಿಪುರ ಗ್ರಾಮದಲ್ಲಿ ರಿಟ್ಜ್ ಕಾರು-ಪಲ್ಸರ್ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಬೈಕಿಗೆ ಡಿಕ್ಕಿ ಹೊಡೆದ ಕಾರು ಆ ಬಳಿಕ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮನೆಗೆ ಹೋಗಿ ನುಗ್ಗಿದೆ. ಕಾರು ಮನೆಗೆ ಡಿಕ್ಕಿಯೊಡೆದ ರಭಸಕ್ಕೆ ಮನೆಯ ಗೋಡೆ ಕುಸಿದು ಬಿದ್ದಿವೆ. ಅದೃಷ್ಟವಶಾತ್ ಮನೆಯ ಮುಂಭಾಗದಲ್ಲಿದ್ದವರು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನು ಭಾರೀ ಮಳೆಗೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ಟೆಂಪೆÇೀ ಕೂಡ ರಸ್ತೆಯ ಪಕ್ಕ ಪಲ್ಟಿಯಾಗಿದೆ. ಗಾಯಗೊಂಡಿದ್ದ ಚಾಲಕನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಫಿನಾಡಿನಾದ್ಯಂತ ಭಾರೀ ಮಳೆಗೆ ಸರಣಿ ಅಪಘಾತಗಳು ಸಂಭವಿಸುತ್ತಿದ್ದು ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!