May 7, 2024

MALNAD TV

HEART OF COFFEE CITY

ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಶೂನ್ಯ_ಹೆಚ್.ಸಿ ಕಲ್ಮರುಡಪ್ಪ

1 min read

 

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆದುಕೊಂಡಿದೆ. ಕಾಂಗ್ರೆಸ್ ಮುಖಂಡರು ಸುಳ್ಳು ಹೇಳುವ ಛಾಳಿಯನ್ನು ಬಿಟ್ಟು ರಚನಾತ್ಮ ವಿರೋಧ ಪಕ್ಷವಾಗಿ ಕೆಲಸ ಮಾಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮುರಡಪ್ಪ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಗುರುತರ ಕೆಲಸವಾಗಿಲ್ಲ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಂಡಿದ್ದು, ಇದನ್ನು ಸಹಿಸದ ಕಾಂಗ್ರೆಸ್ ಮುಖಂಡರು ಶಾಸಕ ಸಿ.ಟಿ.ರವಿ ಮತ್ತು ಸರ್ಕಾರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಶಾಸಕ ಸಿ.ಟಿ.ರವಿ ನೇತೃತ್ವದ ನಿಯೋಗ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕೇಳಿಕೊಂಡಾಗ ಮೆಡಿಕಲ್ ಕಾಲೇಜು ಮಂಜೂರು ಮಾಡುವುದಿಲ್ಲ ಎಂದು ಜಿಲ್ಲೆಯ ಜನತೆ ಯನ್ನು ಅಪಮಾನ ಮಾಡಿದ್ದರು ಎಂದು ತಿಳಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೆಡಿಕಲ್ ಕಾಲೇಜು ಮಂಜೂರಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಅರಳಗುಪ್ಪೆ ಮಲ್ಲೆಗೌಡ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆ ಗೇರಿಸಿ ಹೈಟೆಕ್ ಆಸ್ಪತ್ರೆ ಮಾಡಲಾಗುತ್ತಿದೆ ಎಂದ ಅವರು, ಮೆಡಿಕಲ್ ಕಾಲೇಜು ಈ ವರ್ಷ ದಿಂದ ಶೈಕ್ಷಣಿಕ ವರ್ಷ ಆರಂಭಗೊಳ್ಳಬೇಕಿತ್ತು. ಕೋವಿಡ್ ಕಾರಣದಿಂದ ವಿಳಂಬವಾಗಿದೆ ಎಂದರು.

ಈಗಾಗಲೇ ಆಡಳಿತಾತ್ಮಕ ಮತ್ತು ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ಪ್ರಕಟಗೊಳ್ಳಲಿದೆ. ತಾತ್ಕಾಲಿಕ ಕಟ್ಟಡ ಕಾರ್ಯಾರಂಭವಾಗಿದೆ. ವಸತಿ ಸಮಸ್ಯೆ ಇದ್ದು ಅದಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 1,282ಕೋಟಿ ರೂ. ವೆಚ್ಚದಲ್ಲಿ ಕಡೂರು, ತರೀಕೆರೆ, ಚಿಕ್ಕಮಗಳೂರು ತಾಲ್ಲೂಕು ಗಳ 108 ಕೆರೆ ತುಂಬಿಸುವ ಕಾಮಗಾರಿ ಪ್ರಾರಂಭಗೊಂಡಿದೆ. ರಾಷ್ಟ್ರೀಯ ಜಲವಿಷನ್ ಯೋಜನೆ 108 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿದೆ. ಕಡೂರು, ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ 370 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದ್ದು ಮುಕ್ತಾಯದ ಹಂತ ತಲುಪಿದೆ. ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಮಂಜೂರಾಗಿದೆ.ಮೂಡಿಗೆರೆಗೆ ಸಾಂಬಾರು ಮಂಡಳಿ ಮಂಜೂರಾಗಿದೆ. ತರೀಕೆರೆಯಲ್ಲಿ ಕೃಷಿ ವಿವಿ ಪ್ರಾರಂಭಿಸಲು ಜಾಗ ಗುರುತಿಸಲಾಗಿ ದೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!