May 5, 2024

MALNAD TV

HEART OF COFFEE CITY

ಅಕ್ರಮ ಕಳ್ಳಬಟ್ಟಿ ಅಡ್ಡೆಯ ಮೇಲೆ ಬಾಳೂರು ಪೊಲೀಸರ ದಾಳಿ

1 min read

ಕೊಟ್ಟಿಗೆಹಾರ:ಬಾಳೂರು ಠಾಣಾ ವ್ಯಾಪ್ತಿಯ ಮಲೆಮನೆ ಗುಡ್ಡದ ಅಕ್ರಮ ಕಳ್ಳಬಟ್ಟಿ ಅಡ್ಡೆಯ ಮೇಲೆ ಬಾಳೂರು ಪೊಲೀಸರು ದಾಲಿ ನಡೆಸಿದ್ದಾರೆ.
ಮಲೆಮನೆ ಗ್ರಾಮದಲ್ಲಿ ಅಕ್ರಮ ಕಳ್ಳ ಬಟ್ಟಿ ದಂದೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಬಾಳೂರು ಠಾಣಾ ಪಿಎಸ್‍ಐ ರೇಣುಕಾ ಅವರ ನೇತೃತ್ವದಲ್ಲಿ ದಾಲಿ ನಡೆಸಿದ ಪೊಲೀಸರು 25 ಕೊಡಗಳಲ್ಲಿ ತುಂಬಿದ್ದ ಸುಮಾರು 400 ಲೀಟರ್ ಕಳ್ಳಬಟ್ಟಿ ಕೊಳೆಯನ್ನು ನಾಶ ಪಡಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಪರಿಕರಗಳನ್ನು ವಶಪಡಿಸಿಕೊಂಡಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಬಾಳೂರು ಠಾಣೆಯ ಪಿಎಸ್‍ಐ ರೇಣುಕಾ ಅವರು, ಅಕ್ರಮ ಕಳ್ಳಬಟ್ಟಿ ದಂದೆ ನಡೆಸುತ್ತಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಳ್ಳಬಟ್ಟಿ ದಂದೆ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣಕ್ಕೆ ಒತ್ತಾಯ
ಕಳ್ಳಬಟ್ಟಿ ದಂದೆ ಮಿತಿಮೀರಿದ್ದು ಭಾನುವಾರ ದೊಡ್ಡ ಪ್ರಮಾಣದಲ್ಲಿ ಕಳ್ಳಬಟ್ಟಿ ಕೊಳೆ ಪತ್ತೆಯಾಗಿರುವುದು ಆತಂಕಕಾರಿ ಬೆಳೆವಣಿಗೆಯಾಗಿದೆ. ಮಲೆನಾಡಿನ ಗ್ರಾಮಗಳ ಸ್ವಾಸ್ಥ್ಯವನ್ನು ಕೆಡಿಸುವ ಕಳ್ಳಬಟ್ಟಿ ದಂದೆಗೆ ಕಡಿವಾಣ ಹಾಕಬೇಕು. ಮತ್ತು ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಬಾಳೂರು ಠಾಣಾ ವ್ಯಾಪ್ತಿಯ ಕೆಲ ದಿನಸಿ ಅಂಗಡಿಗಳಲ್ಲಿ ಅಕ್ರಮಮದ್ಯ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದು ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!