May 5, 2024

MALNAD TV

HEART OF COFFEE CITY

ಮುಂದುವರಿದ ಹಿಜಬ್ ವಿವಾದ, ಶಾಲಾ-ಕಾಲೇಜು ಸುತ್ತಮುತ್ತ 144 ಸೆಕ್ಷನ್ ಜಾರಿ

1 min read

ಚಿಕ್ಕಮಗಳೂರು: ಹಿಜಾಬ್ ಧರಿಸುವ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಯನ್ನು ಕಾಪಾಡುವ ನಿಟ್ಟಿನಲ್ಲಿ ಫೆ.16 ಸಂಜೆ 6ಗಂಟೆಯಿಂದ ಫೆ.23 ಸಂಜೆ 6ಗಂಟೆಯ ವರೆಗೂ ಜಿಲ್ಲೆಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು ಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ (144) ನಿಷೇಧಾಜ್ಞೆಯನ್ನು ಜಾರಿಗೊಳಿ ಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿಷೇಧಿತ ಪ್ರದೇಶಲ್ಲಿ 5 ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ, ಯಾವುದೇ ಜಾತಿ, ಧರ್ಮ, ಪಂತಗಳ ಭಾವನೆಗೆ ಧಕ್ಕೆಯುಂಟು ಮಾಡುವ ಚಟುವಟಿಕೆಯನ್ನು ನಿಷೇಧಿಸಲಾಗಿದೆ. ಸರ್ಕಾರಿ ಸಂಸ್ಥೆಗಳು, ಅಧಿಕಾರಿಗಳು ಸಿಬ್ಬಂದಿಗಳನ್ನು ನಿಂಧಿಸುವ ಮತ್ತು ಅವಹೇಳನ ಮಾಡುವ ಘೋಷಣೆ, ಪ್ರಚೋದನಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!