May 5, 2024

MALNAD TV

HEART OF COFFEE CITY

ಅಕ್ರಮ‌ ಜೂಜಾಟ, ಆರೋಪಿಗಳ ಬಂಧನ

1 min read

 

ಚಿಕ್ಕಮಗಳೂರು: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಆಲ್ದೂರು ಠಾಣೆಯ ಪೊಲೀಸರು ದಾಳಿ‌ನಡೆಸಿ 7 ಜನರನ್ನು ಬಂಧಿಸಿದ್ದಾರೆ.

 

ಚಿಕ್ಕಮಗಳೂರು ತಾಲೂಕಿನ ಕೋಟೆವೂರು ಗ್ರಾಮದಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಜೂಜಾಟದಲ್ಲಿ ತೊಡಗಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ‌ನಡೆಸಿದ ಪೊಲೀಸರು 7 ಜೂಜುಕೋರರನ್ನು ಬಂಧಿಸಿದ್ದಾರೆ. ಜೂಜಾಟದಲ್ಲಿ ಪಣಕ್ಕಿಟ್ಟಿದ್ದ 17,330 ರು. ನಗದು ಮತ್ತು ಜೂಜಾಟಗಾರರ 2 ಕಾರುಗಳನ್ನು ಈ ವೇಳೆ ವಶಕ್ಕೆ ಪಡೆಯಲಾಗಿದೆ.

 

ಆಲ್ದೂರು ಠಾಣೆಯ ಸಿಪಿಐ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

 

 ಪೊಲೀಸರು ಎಷ್ಟೇ ಜಾಗ್ರತೆ ವಹಿಸಿದರೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂಜು ದಂಧೆಗೆ ಕಡಿವಾಣ ಬೀಳುತ್ತಿಲ್ಲ. ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಜೂಜಾಟ ಬಹಿರಂಗವಾಗಿಯೇ ನಡೆಯುತ್ತಿದೆ. ಜೂಜುಕೋರರ ಚಟಕ್ಕೆ ಅವರ ಸಂಸಾರಗಳು ಬೀದಿಗೆ ಬೀಳುತ್ತಿವೆ.‌ ಈ ರೀತಿಯ ಕೃತ್ಯಗಳಲ್ಲಿ ತೊಡಗಿದವರ ಮೇಲೆ ಪೊಲೀಸರು ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ‌.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!