May 17, 2024

MALNAD TV

HEART OF COFFEE CITY

ಹಿಜಾಬ್ ವಿವಾದ: ಎನ್‍ಐಎ ಮೂಲಕ ತನಿಖೆಗೆ ಒತ್ತಾಯ

1 min read

 

ಚಿಕ್ಕಮಗಳೂರು: ಹಿಜಾಬ್ ಪ್ರಕರಣದ ಹಿಂದೆ ಮುಸ್ಲಿಂ ಸಂಘಟನೆಗಳ ವ್ಯವಸ್ಥಿತ ಸಂಚಿದ್ದು, ಈ ಕುರಿತು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ದಿಂದ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ  ಮನವಿ ಮಾಡಿ ಆಗ್ರಹಿಸಿದ್ದಾರೆ.

ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವುದರ ಹಿಂದೆ ಮತಾಂಧ ಜಿಹಾದಿಗಳ ಬಹುದೊಡ್ಡ ಷಡ್ಯಂತ್ರವಿದೆ. ಮುಸಲ್ಮಾನ ವಿದ್ಯಾರ್ಥಿಗಳನ್ನು ಬಳಸಿಕೊಂಡು ಶಾಲಾ- ಕಾಲೇಜುಗಳಲ್ಲಿ ಗಲಭೆ ನಡೆಸಿ ಪ್ರತ್ಯೇಕತಾವಾದ ಬಿತ್ತುವ ಪ್ರಯತ್ನ ನಡೆಯುತ್ತಿದೆ. ಪ್ರಕರಣದ ಹಿಂದೆ ದೇಶದ್ರೋಹಿ ಸಂಘಟನೆಗಳಾದ ಪಿಎಫ್‍ಐ ಮತ್ತು ಎಸ್‍ಡಿಪಿಐ ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದೆ. ಸಿಎಫ್‍ಐ(ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಎಂಬ ಮುಸ್ಲಿಂ ಮೂಲಭೂತವಾದಿ ವಿದ್ಯಾರ್ಥಿ ಸಂಘಟನೆಯು ಉಡುಪಿ ಮತ್ತು ಮಣಿಪಾಲದ ರಹಸ್ಯ ಸ್ಥಳದಲ್ಲಿ ಹಿಜಾಬ್ ಬಗ್ಗೆ ವಿವಾದ ಸೃಷ್ಟಿಸಲು ಯುವತಿಯರಿಗೆ ತರಬೇತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ದೂರಲಾಗಿದೆ

ಮುಸ್ಲಿಂ ದೇಶಗಳಲ್ಲೇ ಹಿಜಾಬ್, ಬುರ್ಖಾ ಧರಿಸುವುದು ಕಡ್ಡಾಯವಿಲ್ಲದಿರುವಾಗ ಭಾರತದಲ್ಲಿ ಹಿಜಾಬ್ ಗಾಗಿ ಹೋರಾಟವೇಕೆ ಎಂದು ಪ್ರಶ್ನಿಸಿದರು, ಹಿಜಾಬ್ ವಿಷಯವನ್ನು ಮುನ್ನೆಲೆಗೆ ತರುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಕುಗ್ಗಿಸುವಂತಹ ಹುನ್ನಾರಗಳು ನಡೆಯುತ್ತಿದೆ. ಕೋರ್ಟ್ ಮಧ್ಯಂತರ ಆದೇಶ ಪಾಲಿಸದೇ ವಿದ್ಯಾರ್ಥಿನಿಯರ ಜೊತೆ ಮುಸ್ಲಿಂ ಶಿಕ್ಷಕಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ. ಆ ಮೂಲಕ ಕೋರ್ಟ್ ಆದೇಶವನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಪ್ರಕರಣವನ್ನು ಪ್ರಾರಂಭಿಸಿದ 6 ವಿದ್ಯಾರ್ಥಿನಿಯರು ಹಾಗೂ ಅವರಿಗೆ ಬೆಂಬಲವಾಗಿ ನಿಂತು ಈ ಸಂಚನ್ನು ರೂಪಿಸಿದವರ ವಿರುದ್ಧ ಎನ್‍ಐಎ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿಸ್ಥರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವಂತೆ ವಿಶ್ವಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!