May 2, 2024

MALNAD TV

HEART OF COFFEE CITY

ಡಿಜಿಟಲ್ ಸದಸ್ಯತ್ವ ಅಭಿಯಾನ ಉದ್ಘಾಟನೆ

1 min read

ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಆರಂಭವಾಗಿದೆ, ತಾಲೂಕು ಮತ್ತು ಜಿಲ್ಲಾಪಂಚಾಯಿತಿ ಚುನಾವಣೆ ನಡೆಸಲು ರಾಜ್ಯಸರ್ಕಾರಕ್ಕೆ ಧೈರ್ಯವಿಲ್ಲದಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ ಹೇಳಿದರು.
ಕೆಂಪನಹಳ್ಳಿಯ ಗಾಯತ್ರಿಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾಕಾಂಗ್ರೆಸ್ ಹಮ್ಮಿಕೊಂಡಿದ್ದ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಧಿಕಾರ ವಿಕೇಂದ್ರಿಕರಣದಲ್ಲಿ ಬಿಜೆಪಿಗೆ ಆಸಕ್ತಿ ಇಲ್ಲ, ಅಧಿಕಾರವನ್ನು ಕೇಂದ್ರಿಕರಿಸಿ ಶಾಸಕರ ಮೂಲಕ ಅಧಿಕಾರ ನಡೆಸಲು ಮುಂದಾಗಿದೆ ಎಂದು ಟೀಕಿಸಿದರು.
ಸರ್ಕಾರ ಎಲ್ಲಾ ರಂಗದಲ್ಲೂ ವಿಫಲವಾಗಿದೆ. ಶಾಸಕ ಸ್ಥಾನಕ್ಕೆ ಚುನಾವಣೆ 1 ವರ್ಷಬಾಕಿ ಇದ್ದು, ದೊಡ್ಡಮಟ್ಟದಲ್ಲಿ ತಯಾರಿ ಮಾಡಿಕೊಳ್ಳಬೇಕಿದೆ. ಇಂದಿರಾಗಾಂಧಿಯವರನ್ನು ಗೆಲ್ಲಿಸಿದ ಜಿಲ್ಲೆಯಲ್ಲಿ ಕಾಂಗ್ರೆಸ್ 1ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಮುಂದಿನ ದಿನಗಳಲ್ಲಿ 5 ಶಾಸಕ ಸ್ಥಾನಗಳನ್ನು ಗೆಲ್ಲಬೇಕಿದೆ ಎಂದು ತಿಳಿಸಿದರು.

ಹನ್ನೆರಡು ವರ್ಷದ ಬಳಿಕ ಸದಸ್ಯತ್ವ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಪಕ್ಷದ ಬಲವರ್ಧನೆಗೆ ಒಳ್ಳೆಯ ಅವಕಾಶ ಒದಗಿಬಂದಿದೆ. ಆರಂಭದಲ್ಲಿ ಪುಸ್ತಕದಲ್ಲಿ ಸದಸ್ಯ ನೋಂದಣಿ ಅವಕಾಶ ಮಾಡಿಕೊಡಲಾಗಿತ್ತು. ಎಐಸಿಸಿ ಸೂಚನೆ ಮೇರೆಗೆ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಾರಂಭಿಸಲಾಗಿದೆ ಎಂದರು.
ರಾಜ್ಯದ ಐದು ಜಿಲ್ಲೆಗಳಲ್ಲಿ ತರಬೇತಿ ಅಭಿಯಾನ ಪೂರ್ಣಗೊಂಡಿದೆ. ಈ ಜಿಲ್ಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸುಭದ್ರವಾಗಿ ಕಟ್ಟಲು ಡಿಜಿಟಲ್ ಸದಸ್ಯತ್ವ ನೋಂದಣಿ ಸಹಕಾರಿಯಾಗಲಿದ್ದು, ಎಲ್ಲಾ ರೀತಿಯ ದಾಖಲೆಗಳು ಲಭ್ಯವಾಗಲಿದೆ ಎಂದು ನುಡಿದರು.
ರಾಜ್ಯದಲ್ಲಿ 1 ಕೋಟಿ ಸದಸ್ಯತ್ವಕ್ಕೆ ಗುರಿ ಹೊಂದಿದ್ದು, ಪ್ರತಿ ಕ್ಷೇತ್ರದಲ್ಲಿ 1.50 ಲಕ್ಷ ಸದಸ್ಯರನ್ನಾಗಿಸಬೇಕಾಗಿದೆ. ಮಾ.31ಕ್ಕೆ ಪೂರ್ಣಗೊಳ್ಳುತ್ತಿದ್ದು, 15 ದಿನಗಳ ಕಾಲ ಸಮಯಕೊಡಬೇಕೆಂದು ಮನವಿ ಮಾಡಿದ ಅವರು, ಮುಖ್ಯನೋಂದಣಿಕಾರರು ಕ್ರಿಯಶೀಲರಾಗಿರಬೇಕಿದೆ. ಯುವಕ, ಯುವತಿಯರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!