May 2, 2024

MALNAD TV

HEART OF COFFEE CITY

ನಟ ಪುನೀತ್ ಪತ್ನಿ, ಅಶ್ವಿನಿ ತಂದೆ ರೇವನಾಥ್ ನಿಧನ

1 min read

ನಟ ಪುನೀತ್ ರಾಜ್ ಕುಮಾರ್ ಅವರ ಅಗಲುವಿಕೆಯಿಂದ ನೊಂದಿದ್ದ ಪುನೀತ್ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಪುನೀತ್ ಪತ್ನಿ ಅಶ್ವಿನಿ ಅವರ ತಂದೆ ರೇವನಾಥ್‌ (78) ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ.

ರೇವನಾಥ್ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಭಾಗಮನೆಯವರು. ಅವರು ಬೆಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸಿದ್ದಾರೆ. ರೇವನಾಥ್ ಅವರು ಪುನೀತ್​ ರಾಜ್​ಕುಮಾರ್​ ನಿಧನದ ನಂತರ ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ರೇವನಾಥ್​ ಅವರಿಗೆ ಇಂದು ಬೆಳಗ್ಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕೆಲವೇ ತಿಂಗಳ ಹಿಂದೆ ಪುನೀತ್​ ರಾಜ್​ಕುಮಾರ್ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಅಶ್ವಿನಿ ಅವರಿಗೆ ತೀವ್ರ ಆಘಾತ ಉಂಟು ಮಾಡಿತ್ತು. ಆ ನೋವು ಇನ್ನೂ ಹಸಿಯಾಗಿ ಇರುವಾಗಲೇ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!