April 29, 2024

MALNAD TV

HEART OF COFFEE CITY

ಅಕ್ರಮ ಗೋಮಾಂಸ ಸಾಗಾಟ, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು

1 min read

 

ಚಿಕ್ಕಮಗಳೂರು: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದವನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

 

ಚಿಕ್ಕಮಗಳೂರು ತಾಲೂಕಿನ ಕಣತಿ ಸಮೀಪದ ಹುಣಸೇಹಳ್ಳಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಮೊಹಮ್ಮದ್ ಜಲೀಲ್ ಶೇಕ್ ತನ್ನ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ನಡೆಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆತನನ್ನು ಸೆರೆ ಹಿಡಿದಿದ್ದಾರೆ.

 

ಈ ವೇಳೆ ಕಾರ್ಯಕರ್ತರು ಆತನ ಹಿನ್ನೆಲೆಯನ್ನು ವಿಚಾರಿಸಿದಾಗ ತಾನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಅವರ ತೋಟದ ಕೆಲಸಗಾರ ಎಂದು ಹೇಳಿದ್ದಾನೆ. ಆತನ ಬಳಿಯಿದ್ದ 80 ಕೆಜಿಯಷ್ಟು ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!