May 9, 2024

MALNAD TV

HEART OF COFFEE CITY

ದೈಹಿಕ ಮತ್ತು ಮಾನಸಿಕ ಸದೃಢತೆಗೆ ರಕ್ಷಣಾ ಕಲೆ ತರಬೇತಿ ಸಹಕಾರಿ

1 min read

ಚಿಕ್ಕಮಗಳೂರು-ಯಾವುದೇ ವ್ಯಕ್ತಿಯು ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿದ್ದಾಗ ಸಾಧನೆ ಮೂಲಕ ಗುರಿ ತಲುಪಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಪಂಚಾಯಿತಿ ಸಹಯೋಗದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳಿಗೆ ಗುರುವಾರ ಆಯೋಜಿಸಿದ್ದ ಆತ್ಮರಕ್ಷಣೆ ಕಲೆಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಜೀವನದ ಪ್ರಕ್ರಿಯೆಯಲ್ಲಿ ಸದಾ ಚಟುವಟಿಕೆಯಿಂದ ಕೂಡಿರಲು ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಅತ್ಯಂತ ಅವಶ್ಯಕ. ಈ ಮೂಲಕ ಓದುವ ಹವ್ಯಾಸ, ಕ್ರೀಡೆ, ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಂಡು ಸತತ ಪ್ರಯತ್ನದೊಂದಿಗೆ ಗುರಿ ಸಾಧಿಸಲು ಸಾಧ್ಯವಾಗಲಿದೆ ಎಂದರು.

ಇಂದಿನ ಯುಗದಲ್ಲಿ ಮಹಿಳೆಯರು ಸರ್ವಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ತಮ್ಮ ಆತ್ಮ ರಕ್ಷಣೆಗಾಗಿ, ದೈಹಿಕವಾಗಿ ಆರೋಗ್ಯದಿಂದ ಇರಲು ಇಂತಹ ತರಬೇತಿ ಕಾರ್ಯಾಗಾರಗಳು ಅನುಕೂಲವಾಗಲಿವೆ. ಜಿಲ್ಲೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಬೇತಿ ಕಾರ್ಯಾಗಾರದ ಸದುಪಯೋಗಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಚಿಕ್ಕಮಗಳೂರು ಹಿರಿಯ ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ಮಾತನಾಡಿ ಇತ್ತೀಚಿನ ದಿನಗಳಲ್ಲಿನ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚುತ್ತಿದ್ದು ವಿಕೃತ ಮನಸ್ಸಿನ ಜನರಿಂದ ರಕ್ಷಣೆ ಪಡೆದುಕೊಳ್ಳಲು ಆತ್ಮರಕ್ಷಣಾ ಕಲೆಗಳನ್ನು ಪ್ರತಿಯೊಬ್ಬ ಹೆಣ್ಣುಮಗಳು ಕರಗತ ಮಾಡಿಕೊಂಡಿರಬೇಕು ಎಂದರು
ಸ್ವಯಂ ಆತ್ಮ ರಕ್ಷಣೆಗೆ ಕೌಶಲಗಳು ಅಗತ್ಯ. ಇದರಿಂದಾಗಿ ಸ್ವಯಂ ಚಿಂತನೆ, ಧೈರ್ಯ, ಸೈರ್ಯವನ್ನು ಹೆಚ್ಚಿಸಲಿದೆ, ರಾಜ್ಯದ್ಯಾಂತ ಇಂತಹ ಕಾರ್ಯಾಗಾರಗಳು ನಿರಂತರವಾಗಿ ನಡೆದಲ್ಲಿ ಹೆಣ್ಣುಮಕ್ಕಳ ಮೇಲಿನ ಹಿಂಸೆ, ದೌರ್ಜನ್ಯದಂತಹ ಪ್ರಕರಣಗಳು ಕಡಿಮೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!