May 13, 2024

MALNAD TV

HEART OF COFFEE CITY

ಸೇವಾ ಖಾಯಮಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಬೃಹತ್ ಪ್ರತಿಭಟನೆ

1 min read

ಚಿಕ್ಕಮಗಳೂರು: ಸೇವಾ ಖಾಯಮಾತಿಗೆ ಒತ್ತಾಯಿಸಿ ನೂರಾರು ಅತಿಥಿ ಉಪನ್ಯಾಸಕರು ಇಂದು ನಗರದ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಮೆರವಣಿಗೆ ತೆರಳಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಮಾತಿಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು. ಈಗಾಗಲೇ ಹಲವು ಬಾರಿ ಅನಿರ್ದಿಷ್ಟಾವಧಿ ಮುಷ್ಕರ, ಧರಣಿ, ಸತ್ಯಾಗ್ರಹ, ಪಂಜಿನ ಮೆರವಣಿಗೆ ಮಾಡಿದ್ದ ಉಪನ್ಯಾಸಕರು ಇಂದು ನಗರದ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರು. ಇದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎಷ್ಟೇ ಪ್ರತಿಭಟನೆ ನಡೆಸುತ್ತಿದ್ದರು ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ನೂರಾರು ಬಾರಿ ಮನವಿ ಸಲ್ಲಿಸಿದ್ದೇವೆ ನಮಗೆ ಸೇವೆ ಖಾಯಂಗೊಳಿಸಬೇಕು ಭದ್ರತೆಯನ್ನು ಕಲ್ಪಿಸಬೇಕು. ಅಷ್ಟೇ ಅಲ್ಲದೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೂಡ ನಮ್ಮನ್ನು ಸೇವಾ ಖಾಯಂಗೊಳಿಸುವುದಾಗಿ ಹೇಳಿದ್ದರು ಆದರೆ ಇನ್ನೂ ಕೂಡ ಮಾಡಿಲ್ಲ ಎಂದು ಸಂಘದ ಅಧ್ಯಕ್ಷ ಪೂರ್ಣೇಶ್ ಆರೋಪಿಸಿದ್ರು.
ಹರಿಯಾಣ, ದೆಹಲಿ, ರಾಜಸ್ಥಾನ, ತೆಲಂಗಾಣದಲ್ಲಿ ಸೇವಾ ಖಾಯಂಗೊಳಿಸಿದ್ದಾರೆ. ಅದೇ ಮಾದರಿಯನ್ನು ಇಲ್ಲೂ ಕೂಡ ಜಾರಿಗೊಳಿಸಬೇಕು ಎಂದು ಅವರು ಹೇಳಿದರು. ಅಲ್ಲಿ ಆ ನಿಯಮವನ್ನ ಪಾಲಿಸಿರಬೇಕಾದರೆ ಯಾಕೆ ನಮ್ಮ ರಾಜ್ಯದಲ್ಲಿ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.
ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಸೇವಾ ಖಾಯಂಗೊಳಿಸಿಲ್ಲವೆಂದರೆ, ಸರ್ಕಾರ ಎಲ್ಲಿಯವರೆಗೆ ಮಾಡುವುದಿಲ್ಲವೋ ಅಲ್ಲಿಯವರೆಗೆ ನಿರಂತರವಾಗಿ ಹೋರಾಟ ಮಾಡುತ್ತೇವೆ ಅಷ್ಟೇ ಅಲ್ಲದೆ ಉಪವಾಸ ಸತ್ಯಾಗ್ರಹ ಮಾಡಿ ರಾಷ್ಟ್ರಪತಿಗೆ ದಯಾಮರಣ ಪತ್ರ ಸಲ್ಲಿಸುತ್ತೇವೆ ನಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಪೂರ್ಣೇಶ್ ಎಚ್ಚರಿಸಿದರು. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!