May 1, 2024

MALNAD TV

HEART OF COFFEE CITY

ಕುರಿಗಾವಲು ಪ್ರದೇಶವನ್ನು ಉಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

1 min read

ಚಿಕ್ಕಮಗಳೂರು : ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿರುವ 430 ಎಕರೆ ಕುರಿಗಾವಲು ಪ್ರದೇಶ ಉಳಿವಿಗಾಗಿ ನೂರಾರು ಕುರಿಗಾಹಿಗಳು ಹಾಗೂ ಕುರುಬ ಸಮುದಾಯದ ಮುಖಂಡರು ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

 

ಕಡೂರು ತಾಲೂಕಿನ ಎಮ್ಮೆದೊಡ್ಡಿಯ ಸರ್ವೇ ನಂಬರ್ 70ರ ಕುರಿಕಾವಲು ಪ್ರದೇಶದಲ್ಲಿ ಸುಮಾರು 430 ಎಕರೆಯಷ್ಟು ಜಾಗದಲ್ಲಿ ಈ ಮೊದಲು ಕುರಿ ಮತ್ತು ದನಕರುಗಳನ್ನು ಮೇಯಿಸಲಾಗುತ್ತಿತ್ತು. ಇದೇ ಪ್ರದೇಶವನ್ನು ಕೆಲವರು ಒತ್ತುವರಿ ಮಾಡಿರುವ ಆರೋಪ ಕೂಡ ಕೇಳಿಬಂದಿತ್ತು. ಹೀಗಾಗಿ ಇದನ್ನು ಪ್ರಶ್ನೆ ಮಾಡಿದವರ ಮೇಲೆಯೇ ಸುಳ್ಳು ಕೇಸ್ ಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅನೇಕ ದಶಕಗಳಿಂದ ಇದೇ ಗೋಮಾಳದಲ್ಲಿ ದನಕರುಗಳು, ಕುರಿಗಳನ್ನು ಮೇಯಿಸುತ್ತಿದ್ದ ಪ್ರದೇಶವನ್ನು ಸಾರ್ವಜನಿಕ ನಿರ್ಬಂಧಿತ ಪ್ರದೇಶವನ್ನಾಗಿ ಮಾಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನು ವಿರೋಧಿಸಿ ಹಾಗೂ ಕುರಿಗಾವಲು ಪ್ರದೇಶವನ್ನು ಉಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!