May 7, 2024

MALNAD TV

HEART OF COFFEE CITY

ಮೇ. 10 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಿ : ಜಿಲ್ಲಾಧಿಕಾರಿ

1 min read

ಮೇ. 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ, ಕೃಷಿ ಇಲಾಖೆ, ವಿಕಲಚೇತನರ ಮತ್ತು ಹಿರಿಯನಾಗರೀಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಇಂದು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮೇ. 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಸ್ವೀಪ್ ಸಮಿತಿಯಿಂದ ಜಿಲ್ಲೆಯ ವಿವಿಧೆಡೆ ವೈವಿದ್ಯಮಯ ಹಾಗೂ ವಿನೂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾನ ಮಹತ್ವ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕಳೆದ ಚುನಾವಣೆಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹೋಲಿಕೆ ಮಾಡಿದಾಗ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ ಎಂದ ಅವರು ಚಿಕ್ಕಮಗಳೂರಿನ ನಗರ ಪ್ರದೇಶದ ವ್ಯಾಪ್ತಿಯ 109 ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣ ಗ್ರಾಮೀಣ ಪ್ರದೇಶದ ಸರಾಸರಿಗಿಂತ ಕಡಿಮೆ ಇರುವುದು ಕಂಡು ಬರುತ್ತದೆ. ಆ ಕಾರಣದಿಂದ ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಮತದಾನದ ಮಹತ್ವದ ಕುರಿತು ಸ್ವೀಪ್ ಸಮಿತಿಯಿಂದ ಅರಿವು ಮೂಡಿಸಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ಮತದಾರರು ಮೇ. 10 ರಂದು ಕಡ್ಡಾಯವಾಗಿ ಮತಗಟ್ಟೆಗೆ ತೆರಳಿ ತಮ್ಮ ಮತ ಚಲಾಯಿಸುವಂತೆ ಹೇಳಿದ ಅವರು ರಾಜ್ಯದಲ್ಲಿ ಮತದಾನ ಪ್ರಮಾಣದಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿರ ಬೇಕು ಎಂದರು.

ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ತಾರನಾಥ್ ಮಾತನಾಡಿ ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚು ಮಾಡುವ ದೃಷ್ಟಿಯಿಂದ ಸ್ವೀಪ್ ಸಮಿತಿಯಿಂದ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಹಿಂದಿನ ಚುನಾವಣೆಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ಗ್ರಾಮೀಣ ಪ್ರದೇಶಗಳಿಗಿಂತ ಕಡಿಮೆ ಮತದಾನವಾಗಿದ್ದು, ಕಡಿಮೆ ಮತದಾನವಾಗಿರುವ ಮತದಾನ ಕೇಂದ್ರಗಳಲ್ಲಿ ಮತದಾನದ ಮಹತ್ವ ಕುರಿತು ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಮೇ. 10 ರ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತಗಟ್ಟೆ ತೆರಳಿ ಮತ ಚಲಾಯಿಸುವಂತೆ ತಿಳಿಸಿದರು.ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ :- ಮತದಾನ ನಿಮ್ಮ ಹಕ್ಕು, ತಪ್ಪದೇ ಮತ ಹಾಕಿ, ನಮ್ಮ ಮತ ನಮ್ಮ ಹಕ್ಕು, 18 ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಶ್ರೇಷ್ಠ ನಾಯಕನನ್ನು ಆಯ್ಕೆ ಮಾಡಿ. ಮತದಾನ ಒಂದು ಶಕ್ತಿ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿ. ಜಾಗೃತ ಮತದಾರ ಸದೃಢ ಪ್ರಜಾಪ್ರಭುತ್ವದ ಬುನಾದಿ, ಕಡ್ಡಾಯ ಮತದಾನದ ಮೂಲಕ ಉತ್ತಮರನ್ನು ಆಯ್ಕೆ ಮಾಡಿ ಎಂಬ ಸಂದೇಶಗಳು ಚಿತ್ತಾಕರ್ಷಕ ರಂಗೋಲಿ ಮೂಲಕ ನೋಡುಗರಲ್ಲಿ ಮತದಾನ ಜಾಗೃತಿ ಹಾಗೂ ಮಹತ್ವ ಸಾರಿದವು. ವಿವಿಧ ಇಲಾಖೆಯ ಮಹಿಳಾ ನೌಕರರು ಮತದಾನ ಜಾಗೃತಿಗಾಗಿ ಕಣ್ಮನ ಸೆಳೆಯುವ ಬಣ್ಣ ಬಣ್ಣದ ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದವು.
ಜಿಲ್ಲಾ ವಿಕಲಚೇತನ ಮತ್ತು ಹಿರಿಯನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಮತದಾನದ ಜಾಗೃತಿ ಕುರಿತು ಅಂಗವಿಕಲರಿಂದ ನಗರದ ವಿವಿಧ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು. ಜಾಥಾಕ್ಕೆ ಸ್ವೀಪ್ ರಾಯಭಾರಿ ಮೋಹನ್‌ಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ ಶಿವನಾಂದ್, ಬಿ.ಸಿ.ಎಂ. ಅಧಿಕಾರಿ ಸೋಮಶೇಖರ್, ನಗರಸಭೆ ಆಯುಕ್ತ ಉಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್. ರಾಜನಾಯ್ಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಚರಣ್‌ರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!