May 19, 2024

MALNAD TV

HEART OF COFFEE CITY

ಮಾರ್ಚ್ 27 ರಂದು ಮೆಘ ಲೋಕ್ ಅದಾಲತ್

1 min read

ಚಿಕ್ಕಮಗಳೂರು : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ ಮೆಘಾ ಲೋಕ ಅದಾಲತ್ ನ್ನು ಮಾರ್ಚ್ ೨೭ ರಂದು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ಮೇಗ ಲೋಕ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗೌರವಾನ್ವಿತ ಜಿಲ್ಲಾ ಸತ್ರ ನ್ಯಾಯಾಧೀಶೆ ಶುಭ ಗೌಡರ್ ತಿಳಿಸಿದರು.
ಅವರು ಇಂದು ಜಿಲ್ಲಾ ನ್ಯಾಯಾಲಯದ ಎ.ಡಿ.ಆರ್ ಸಭಾಂಗಣದಲ್ಲಿ ಮೆಘಾ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿದಿಗಳಿಗೆ ಮಾಹಿತಿ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು ೭೧೫೪ ಪ್ರಕರಣಗಳು ರಾಜಿ ಮಾಡಿಕೊಳ್ಳುವ ಪ್ರಕರಣಗಳಾಗಿದ್ದು ಅವುಗಳನ್ನು ಮಾರ್ಚ್ ೨೭ ರಂದು ನಡೆಯುವ ಮೆಘಾ ಲೋಕ ಅದಾಲತ್ ನಲ್ಲಿ ಭಾಗವಹಿಸುವ ಮೂಲಕ ಕಕ್ಷಿದಾರರು ಶೀಘ್ರವಾಗಿ ತಮ್ಮ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು ಹಾಗೂ ಅದಾಲತ್ ನಲ್ಲಿ ಭಾಗವಹಿಸಿ ರಾಜಿ ಮಾಡಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲಾ  ಎಂದರು.
ಕಳೆದ ಬಾರಿ ಜಿಲ್ಲೆಯಲ್ಲಿ ೩೯೭೨ ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದೇವೆ. ಈ ಬಾರಿ ನಡೆಯುವ ಮೆಘಾ ಲೋಕ ಅದಾಲತ್ ನಲ್ಲಿ ಇನ್ನೂ ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಉದ್ದೇಶ ಹೊಂದಿದ್ದೇವೆ ಎಂದ ಅವರು ಕಕ್ಷಿದಾರರು ಮತ್ತು ವಕೀಲರು ಲೋಕ ಅದಾಲತ್ ಕಾರ್ಯಕ್ರಮಕ್ಕೆ ಸಹಕರಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಇದುವರೆಗೂ ೧೩೮೯ ರಾಜಿ ಮಾಡುವ ಪ್ರಕರಣಗಳನ್ನು ಗುರುತಿಸಲಾಗಿದ್ದು, ಪ್ರತಿದಿನ ಪ್ರಕರಣಗಳನ್ನು ಗುರುತಿಸಲಾಗುತ್ತಿದೆ ಅಂತಹ ಕಕ್ಷಿದಾರರು ಲೋಕ ಅದಾಲತ್ ನಲ್ಲಿ ಭಾಗವಹಿಸಿ ರಾಜಿ ಮಾಡಿಕೊಳ್ಳಬಹುದು, ರಾಜಿಯಾದ ಪ್ರಕರಣಗಳಿಗೆ ಕೋರ್ಟ್‌ಗೆ ಭರಿಸಿದ ವೆಚ್ಚವನ್ನು ವಾಪಸ್ಸು ನೀಡಲಾಗುತ್ತದೆ ಎಂದು ತಿಳಿಸಿದರು.
ಮೆಘಾ ಲೋಕ ಅದಾಲತ್‌ನಲ್ಲಿ ಹಣ ವಸೂಲಾತಿ ವ್ಯಾಜ್ಯ, ವಿದ್ಯುತ್ ವ್ಯಾಜ್ಯ, ಬ್ಯಾಂಕ್ ವ್ಯಾಜ್ಯ, ಕಾರ್ಮಿಕರ ವಿವಾಧ ವ್ಯಾಜ್ಯ, ವಿವಾಹ ಸಂಬಂಧಿತ ವ್ಯಾಜ್ಯ, ಭೂ ಸ್ವಾಧಿನ, ಕಂದಾಯದ ವ್ಯಾಜ್ಯಗಳು, ಸಿವಿಲ್ ವ್ಯಾಜ್ಯಗಳು, ವಿವಿಧ ಕ್ರಿಮಿನಲ್ ಮೊಕ್ಕದಮೆಸಗಳು, ಜನನ ಮತ್ತು ಮರಣ ನೊಂದಾಣಿ ಮುಂತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜೀ ಮಾಡಿಕೊಳ್ಳಬಹುದು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಪ್ರಧಾನ ಹಿರಿಯ ನ್ಯಾಯಾಧೀಶ ಹಾಗೂ ಪ್ರಭಾರ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಎನ್ ಹೆಗ್ಡೆ ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!