May 9, 2024

MALNAD TV

HEART OF COFFEE CITY

ಮಿನಿ ಗೂಡ್ಸ್ – ಲಾರಿ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು

1 min read

ಚಿಕ್ಕಮಗಳೂರು: ರಸ್ತೆ ಪಕ್ಕ ನಿಲ್ಲಿಸಿದ ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನ ಪಲ್ಟಿಯಾಗಿರುವ ಘಟನೆ ಮೂಡಿಗೆರೆ ತಾಲೂಕು ರಾಷ್ಟ್ರೀಯ ಹೆದ್ದಾರಿ ಬಣಕಲ್ ನಲ್ಲಿ ನಡೆದಿದೆ. ಬೆಂಗಳೂರಿನಿಂದ-ಮಂಗಳೂರಿಗೆ ಹೋಗುತ್ತಿದ್ದ ಕೊರಿಯರ್ ಲಾರಿಯು ರಸ್ತೆ ಪಕ್ಕ ನಿಲ್ಲಿಸಿದ ಮಿನಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿ ವಾಹನಗಳು ಜಖಂ ಆಗಿವೆ. ಲಾರಿ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಗೂಡ್ಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!