May 16, 2024

MALNAD TV

HEART OF COFFEE CITY

ದೇವಾಲಯಗಳು ಭಕ್ತಿ ಮತ್ತು ನಂಬಿಕೆಯ ಪ್ರತೀಕವಿದ್ದಂತೆ: ಎಂ.ಕೆ.ಪ್ರಾಣೇಶ್

1 min read

ಚಿಕ್ಕಮಗಳೂರು: ಹಿಂದೂ ಧಾರ್ಮಿಕ ಸಂಸ್ಕøತಿಯಲ್ಲಿ ದೇವಾಲಯಗಳು ಭಕ್ತಿ ಮತ್ತು ನಂಬಿಕೆಯ ಪ್ರತೀಕವಿದ್ದಂತೆ ಎಂದು ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಬೀಕನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾ ಟ್ರಸ್ಟ್, ಶ್ರೀ ಮಲ್ಲೇಶ್ವರ, ಶ್ರೀ ಕಲ್ಲೇಶ್ವರ, ಶ್ರೀ ಸಿದ್ದೇಶ್ವರ, ಶ್ರೀ ಮರುಳಸಿದ್ದೇಶ್ವರ, ಚಾಮುಂಡೇಶ್ವರಿ ದೇವಸ್ಥಾನಗಳ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಹಸ್ರನಾಮ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಹಿಂದೂ ಸಂಸ್ಕøತಿಯಲ್ಲಿ ದೇವಾಲಯಗಳಿಗೆ ವಿಶೇಷ ಪ್ರಾಧನ್ಯತೆ ಇದೆ. ದೇವಾಲಯಗಳು ಶ್ರದ್ದೆ, ನಂಬಿಕೆಯ ಪ್ರತೀಕವಾಗಿದ್ದು, ಪರಸ್ಪರ ವಿಶ್ವಾಸ ಬೆಳೆಸಲಿದೆ. ಆ ನಿಟ್ಟಿನಲ್ಲಿ ಹಿಂದೂ ಸಂಸ್ಕøತಿಯಲ್ಲಿ ದೇವಾಲಯಗಲ್ಲಿ ಪೂಜೆ ಪುನಸ್ಕಾರಗಳ ಮೂಲಕ ಆರಾಧನೆ ಮಾಡಲಾಗುತ್ತದೆ ಎಂದು ಅಭಿಪ್ರಾಯಿಸಿದರು.
ದೇವಾಲಯಗಳ ನಿರ್ಮಾಣ ಒಂದು ಸವಾಲಿನ ಕೆಲಸವೇ ಸರಿ. ವಿವಿಧ ಮೂಲಗಳಿಂದ ಬರುವ ಅನುದಾನ ತರುವಲ್ಲಿ ಗ್ರಾಮಸ್ಥರಲ್ಲಿ ಒಗ್ಗಟ್ಟು ಇರಬೇಕು ಆಗಿದ್ದಲ್ಲಿ ಮಾತ್ರವೇ ಯಾವುದೇ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಲು ಸಾಧ್ಯವಾಗಲಿದೆ, ನಾನು ಎಂಬ ಅಹಂಭಾವನೆ ಬಿಟ್ಟು ನಾವೆಲ್ಲರೂ ಎಂಬ ಮನೋಭಾವನೆ ಬೆಳೆಸಿಕೊಳ್ಳಬೇಕಾದ ಅಗತ್ಯತೆ ಇದೆ ಎಂದರು.
ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನಲೆ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು, ಜತೆಗೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.
ತರೀಕೆರೆ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ ಶ್ರದ್ದೆ, ಭಕ್ತಿಯ ಪ್ರತೀಕವಾಗಿ ದೇವಾಲಯಗಳು ಹಿಂದೂ ಸಂಸ್ಕoತಿಯಲ್ಲಿ ವಿಶೇಷ ಪ್ರಾಧನ್ಯತೆ ಹೊಂದಿವೆ. ದೇವಾಲಯ, ಸಮುದಾಯ ಭವನಗಳ ನಿರ್ಮಾಣಕ್ಕೆ ಆರ್ಥಿಕ ಮುಗ್ಗಟ್ಟು ಎದುರಾದಾಗ ಎಲ್ಲವನ್ನು ನಿಭಾಯಿಸಿ ವಿವಿಧ ಮೂಲಗಳಿಂದ ಅನುದಾನ ತಂದು ದೇವಾಲಯ ನಿರ್ಮಿಸುವುದು ಸವಾಲಿನ ಕೆಲಸ. ಅದಕ್ಕಾಗಿ ಗ್ರಾಮಸ್ಥರ ಒಗ್ಗಟ್ಟು ಬೇಕಿದೆ ಎಂದು ಸಲಹೆ ನೀಡಿದರು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಲವು ದಶಕಗಳಿಂದ ಸಾಲ ಸೌಲಭ್ಯದ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡು ಕಾರ್ಯನಿರ್ವಹಿಸುತ್ತಿದ್ದು ಇದೀಗ ದೇವಾಲಯ, ಧಾರ್ಮಿಕ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡುತ್ತಿರುವುದು ಅಭಿನಂದನಾರ್ಹ ಸಂಗತಿ ಎಂದು ಮೆಚ್ಚುಗೆ ಸೂಚಿಸಿದರು.
ಬಿಜೆಪಿ ಮುಖಂಡರಾದ ಪಲ್ಲವಿ ಸಿ.ಟಿ ರವಿ ಮಾತನಾಡಿ ಇಂದಿನ ಪೀಳಿಗೆಯ ಮಕ್ಕಳು ಶಿಕ್ಷಣದ ಜತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು, ನಮ್ಮ ಧರ್ಮವನ್ನು ನಾವು ಗೌರವಿಸಬೇಕು, ಧಾರ್ಮಿಕ ಕಾರ್ಯಕ್ರಮಗಳು ನಂಬಿಕೆ, ಶ್ರದ್ದೆ ಭಕ್ತಿಯನ್ನು ಬೆಳಸಲಿವೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!