April 30, 2024

MALNAD TV

HEART OF COFFEE CITY

“ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಹಾಡಿಗೆ ಶಾಸಕ ಸಿ.ಟಿ.ರವಿ ಮಸ್ತ್ ಸ್ಟೆಪ್ಸ್

1 min read

 

ಚಿಕ್ಕಮಗಳೂರು. ಡಾ.ರಾಜ್ ಕುಮಾರ್ ಅಭಿನಯದ ಆಕಸ್ಮಿಕ ಚಿತ್ರದ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಗೀತೆಗೆ ಶಾಸಕ ಸಿ.ಟಿ.ರವಿ ಮಸ್ತ್ ಸ್ಟೆಪ್ ಹಾಕಿದ್ದಾರೆ. ತಾವೇ ಹಾಡು ಹೇಳಿಕೊಂಡು ಕುಣಿಯುವಾಗ ಪಕ್ಕದಲ್ಲೇ ನಿಂತಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಚಪ್ಪಾಳೆ ತಟ್ಟುವ ಮೂಲಕ ಸಿ.ಟಿ.ರವಿಗೆ ಸಾಥ್ ನೀಡಿದರು. ಇಂದು ನಗರದ ಸುಭಾಷ್ ಚಂದ್ರ ಭೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ವೈಟ್ ಅಂಡ್ ವೈಟ್ ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದಾರೆ. ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಬಾರಿಸು ಕನ್ನಡ ಡಿಂಡಿಮವ, ಹುಯಿಲಗೋಳ ನಾರಾಯಣರ ರಚನೆಯ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಡಾ.ಡಿ.ಎಸ್.ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ಚನ್ನವೀರಕಣವಿ ಬರೆದಿರುವ ವಿಶ್ವ ವಿನೂತನ ವಿದ್ಯಾಚೇತನ ಮೂಹಿಕವಾಗಿ ಹಾಡಲಾಯಿತು. ಕೋಟಿ ಕಂಠ ಗಾಯನ ಕನ್ನಡಿಗರನ್ನು ಭಾರತೀಯತೆಗೆ ಜೋಡಿಸಿದೆ.

ತಾಯಿ ಭಾರತಿಗೆ ಅಮೃತದಾರತಿ ಎನ್ನುವಂತೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಸರ್ಕಾರ ಈ ಅಭಿಯಾನವನ್ನು ಆಯೋಜನೆ ಮಾಡಿದೆ ಎಂದರು. ಕನ್ನಡಿಗರನ್ನ ಒಟ್ಟಿಗೆ ಸೇರಿಸಿ ಕನ್ನಡವನ್ನು ಕೋಟಿ ಕಂಠಗಳ ಮೂಲಕ ಕಟ್ಟುವ ಕಾರ್ಯವನ್ನು ಸರ್ಕಾರ ಮಾಡಿದೆ. ನಮ್ಮ ಹೃದಯದಲ್ಲಿ ದೇಶಾಭಿಮಾನ, ಭಾಷಾಭಿಮಾನ ಬಂದರೆ ಮಣಿಸುವ ತಾಕತ್ತು ಯಾರಿಗೂ ಇರುವುದಿಲ್ಲ. ಭಾಷೆಯ ಮೂಲಕ ದೇಶ ಕಟ್ಟುವ ಕಾರ್ಯವನ್ನು ಸರ್ಕಾರ ಮಾಡಿರುವುದು ಹೆಮ್ಮೆಯ ಸಂಗತಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ಹಾಡು ಹೇಳಿಕೊಂಡು ಕುಣಿಯುತ್ತಿದ್ದಂತೆ ಅಲ್ಲೇ ಇದ್ದ ಕಾಫಿನಾಡ ಚಂದು ಕೂಡ ಸಿ.ಟಿ.ರವಿ ಜೊತೆ ಸೇರಿ ಕುಣಿದು ಕುಪ್ಪಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!