May 3, 2024

MALNAD TV

HEART OF COFFEE CITY

ವಿದ್ಯುತ್ ಗುತ್ತಿಗೆದಾರರ ಸಂಘದ ಕಟ್ಟಡಕ್ಕೆ ಅನುದಾನ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ

1 min read

ಚಿಕ್ಕಮಗಳೂರು-ವಿದ್ಯುತ್ ಕಂಪನಿಯಲ್ಲಿ ಸಾರ್ವಜನಿಕರು ಮತ್ತು ಗುತ್ತಿಗೆದಾರರಿಗೆ ತೊಂದರೆ ಆಗದ ರೀತಿ ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಥಳದಲ್ಲಿಯೇ ಸಮಸ್ಯೆ ಬಗೆ ಹರಿಸಲು ಕ್ರಮ ವಹಿಸುತ್ತೇನೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು.ಅವರು ಇಂದು ಪ್ರವಾಸಿ ಮಂದಿರದಲ್ಲಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಕ್ಷೇತ್ರದ ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಸ್ವಂತ ಕಟ್ಟಡ ಇಲ್ಲ ಎಂದು ಮನವಿ ನೀಡಿದ್ದು ಸರ್ಕಾರದ ವತಿಯಿಂದ ಇದಕ್ಕೆ ಬೇಕಾದ ಎಲ್ಲಾ ರೀತಿಯ ಮೂಲ ಸೌಲಭ್ಯದ ಜೊತೆಗೆ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.ನಾನೊಬ್ಬ ಸಾಮಾನ್ಯ ಕುಟುಂಬದಿಂದ ಬಂದ ವ್ಯಕ್ತಿಯಾಗಿದ್ದು ಜನ ಸಾಮಾನ್ಯರ ಸಮಸ್ಯೆಗೆ ಆದ್ಯತೆ ಮೇಲೆ ಸ್ಪಂದಿಸುತ್ತೇನೆ, ನನ್ನ ಬಳಿ ಬಂದು ಸಮಸ್ಯೆಗಳನ್ನು ಹೇಳಿದರೆ ಅದನ್ನು ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಸರ್ಕಾರ ಅಸ್ಥಿತ್ವಕ್ಕೆ ಬಂದು ಒಂದುವಾರ ಕಳೆದಿಲ್ಲ ಬಡವರ ಬದುಕಿನ ಬಗ್ಗೆ ಚಿಂತೆ ಇಲ್ಲದ ಬಿಜೆಪಿ ಯವರು ನೀರಿನಿಂದ ಮೀನು ಹೊರ ಹಾರೆದವರಂತೆ ಅಧಿಕಾರವಿಲ್ಲದೆ ವಿಲ ವಿಲ ಒದ್ದಾಡುತ್ತಿದ್ದಾರೆ ಮದುವೆ ಆಗಿ ಮುಹೂರ್ತದ ಊಟ ಮಾಡಿದ್ದೇವೆ ದಿಬ್ಬಣದವರೆಗೂ ಕಾಯಬೇಕು ಕೊಟ್ಟ ಭರವಸೆ ಈಡೇರಿಸುತ್ತೇವೆ ಎಂದು ತಿರುಗೇಟು ನೀಡಿದರು.ಈ ಸಂಬಂಧ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಕೊಟ್ಟ ಭರವಸೆಗಳನ್ನು ಈಡೇರಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ ಜೂನ್ ಮೊದಲ ವಾರದಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ನಮ್ಮ ನಾಯಕರು ತರುತ್ತಾರೆ ಅಲ್ಲಿಯವರೆಗೆ ವಿಪಕ್ಷಗಳು ಶಾಂತಿ ಸಂಯಮ ಕಾಪಾಡಬೇಕೆಂದು ಹೇಳಿದರು.ತಮ್ಮ ಅಧಿಕಾರವಧಿಯಲ್ಲಿ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆಂದು ಆರೋಪಿಸಿ ಮಾಜಿ ಶಾಸಕರು ಪತ್ರ ಬರೆದಿರುವ ಬಗ್ಗೆ ಗಮನ ಸೆಳೆದಾಗ ಅವರ ಕಣ್ಣು ತೆರಸಲಿಕ್ಕಾಗಿ ಬಿಜೆಪಿಯನ್ನು ಬಿಟ್ಟು ಹೊರ ಬಂದಿದ್ದು ಈಗ ಸಿ.ಟಿ. ರವಿಗೆ ಜ್ಞಾನೋದಯವಾಗಿದೆ ಜನರ ಸಮಸ್ಯೆ ಕಾಣುತ್ತಿದೆ ಆದರೆ ಮಾಜಿ ಶಾಸಕ ಸಿ.ಟಿ. ರವಿಯಿಂದ ಪಾಠ ಕಲಿಯುವ ಅಗತ್ಯ ಇಲ್ಲ ನನಗೂ ರಾಜಕೀಯ ಗೊತ್ತಿದೆ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ ಈ ಮೂಲಕ ಜನಪರ ಕೆಲಸ ಮಾಡಿ ತೋರಿಸುತ್ತೇನೆ ಎಂದು ಸವಾಲೆಸದರು.

ಕಾಮಗಾರಿ ಗುಣಮಟ್ಟ ಕಾಪಾಡಬೇಕು ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಈ ಬಗ್ಗೆ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು.ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಆರ್.ಹರೀಶ್ ಮಾತನಾಡಿ ವಿದ್ಯುತ್ ಗುತ್ತಿಗೆದಾರರಿಗೆ ಹಲವಾರು ಸಮಸ್ಯೆಗಳಿದ್ದು ಟೆಂಡರ್ ವಿಷಯದಲ್ಲಿ ಅಧಿಕಾರಿಗಳಿಂದ ಅನ್ಯಾಯವಾಗಿದೆ, ರಾಜ್ಯದಲ್ಲಿ 25 ಸಾವಿರ ಗುತ್ತಿಗೆದಾರರಿದ್ದು ಅವರನ್ನು ನಂಬಿಕೊಂಡ ಕುಟುಂಬಗಳು ಹಾಗೂ ಲಕ್ಷಾಂತರ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ, ಆದ್ದರಿಂದ 1 ರಿಂದ 5 ಲಕ್ಷದ ವರೆಗೂ ತುಂಡು ಗುತ್ತಿಗೆಯನ್ನು ಜಾರಿಗೊಳಿಸುವಂತೆ ಈ ಹಿಂದೆ ಆದೇಶಿಸಲಾಗಿದ್ದರು ಸಹ ಜಾರಿಗೆ ಬರಲಿಲ್ಲ, ಮುಖ್ಯ ಮಂತ್ರಿ ಸಿದ್ಧರಾಮಯ್ಯ ರವರಿಗೆ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷರು ಮನವಿ ಮಾಡಲಾಗುವುದು, ಹಾಗೂ ಸ್ಥಳಿಯ ಶಾಸಕರಾದ ಹೆಚ್.ಡಿ.ತಮ್ಮಯ್ಯ ರವರಿಗೆ ಇದರ ಬಗ್ಗೆ ತಿಳಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ಮಹಿಳಾ ವಿಭಾಗದ ಉಪಾಧ್ಯಕ್ಷೆ ರೇಖಾಹುಲಿಯಪ್ಪ ಗೌಡ, ಜಿಲ್ಲಾ ಕಾಂಗ್ರೆಸ್ ವಕ್ತಾರ ರೂಬಿನ್ ಮೊಸಸ್, ಮುಖಂಡರಾದ ಸಂದೇಶ್, ಹುಲಿಯಪ್ಪಗೌಡ ವಿದ್ಯುತ್ ಗುತ್ತಿಗೆದಾರರ ಜಿಲ್ಲಾ ಸಂಘದ ಪದಾಧಿಕಾರಿಗಳಾದ ನರೇಶ್.ಯು, ಪ್ರಸನ್ನ.ಕೆ.ಬಿ, ಆರ್.ಎಂ. ಮರಿಯಾರಾಜ್, ಹರೀಶ್‍ಕುಮಾರ್, ಕಾಂತಕುಮಾರ್, ಅಬ್ದುಲ್ ಅಲಿ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!