May 17, 2024

MALNAD TV

HEART OF COFFEE CITY

ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಮಂತ್ರಿಸ್ಥಾನ ನೀಡಿ ಜಿಲ್ಲಾ ಒಕ್ಕಲಿಗರ ಸಂಘ

1 min read

ಚಿಕ್ಕಮಗಳೂರು-ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಮಂತ್ರಿಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಈ ಸಂಬoಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಧಾನಸಭಾ ಚುನಾವಣೆಯಲ್ಲಿ ಟಿ.ಡಿ.ರಾಜೇಗೌಡ ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಅವರನ್ನು ಸಂಘ ಅಭಿನಂದಿಸುತ್ತದೆ. ಟಿ.ಡಿ.ರಾಜೇಗೌಡರು ಈ ಹಿಂದೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು ಸಾಕಷ್ಟು ಅನುಭವವನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಂತ್ರಿ ಮಂಡಲದಲ್ಲಿ ಟಿ.ಡಿ.ರಾಜೇಗೌಡರಿಗೆ ಮಂತ್ರಿ ಸ್ಥಾನ ನೀಡಿ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುವಂತೆ ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳನ್ನು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ನಿರ್ದೇಶಕರು ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಟಿ.ರಾಜಶೇಖರ್ ಉಪಾದ್ಯಕ್ಷ ಲಕ್ಷö್ಮಣ್‌ಗೌಡ, ಕಾರ್ಯದರ್ಶಿ ಎಂ.ಸಿ.ಪ್ರಕಾಶ್, ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!