May 5, 2024

MALNAD TV

HEART OF COFFEE CITY

ಭಾವನೆಗಳನ್ನು ಕೆರಳಿಸುವವರ ದೂರ ಸರಿಸಿ ಜನಪರ ವ್ಯಕ್ತಿ ಹೆಚ್.ಡಿ ತಮ್ಮಯ್ಯ ಬೆಂಬಲಿಸಿ: ದೇವರಾಜ್

1 min read

ಚಿಕ್ಕಮಗಳೂರು-ಕಳೆದ 20 ವರ್ಷದಲ್ಲಿ ಕ್ಷೇತ್ರದ ಅಭಿವೃದ್ದಿ ಮಾಡದೆ ರಾಜ್ಯಾದ್ಯಂತ ಜನರ ಭಾವನೆಗಳನ್ನು ಕೆರಳಿಸುವ ಕೆಲಸವನ್ನು ಶಾಸಕರನ್ನು ದೂರ ಇಟ್ಟು ಜನಪರ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಡಿ ತಮ್ಮಯ್ಯ ಅವರನ್ನು ಬೆಂಬಲಿಸಿ ಮತ ನೀಡಬೇಕೆಂದು ಕೆ.ಪಿ.ಸಿ.ಸಿ ವಕ್ತಾರ ಹೆಚ್.ಹೆಚ್ ದೇವರಾಜ್ ಮನವಿ ಮಾಡಿದರು.ಅವರು ಮಂಗಳವಾರ ನಗರದ ಉಪ್ಪಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್.ಡಿ ತಮ್ಮಯ್ಯ ಅವರ ಪರವಾಗಿ ಮತ ಯಾಚನೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿಯವರು ಮುಸ್ಲಿಂರ ಮತ ಬೇಡ ಎಂದು ಹೇಳಿದ್ದಾರೆ ಆದರೆ ಮುಸ್ಲಿಂರು ಮತದಾರರ ಚೀಟಿ, ಆಧಾರ್ ಕಾರ್ಡ್ಗಳನ್ನು ಕೇಳಿದರೆ ದಯವಿಟ್ಟು ಕೊಡಬೇಡಿ ಟಿಪ್ಪುಸುಲ್ತಾನ್ ಕೊಂದವರು ಉರಿಗೌಡ, ನಂಜೇಗೌಡ ಎಂದು ಜನರಲ್ಲಿ ಗೊಂದಲ ಸೃಷ್ಠಿಸುತ್ತಿದ್ದಾರೆ ಎಂದು ಟೀಕಿಸಿದರು.ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ದೇವರಾಜ್ ಕ್ಷೇತ್ರದ ಅಭ್ಯರ್ಥಿ ಹೆಚ್.ಡಿ ತಮ್ಮಯ್ಯ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿAದ ಗೆಲುವು ಸಾಧಿಸುತ್ತಾರೆ ಎಂದು ಹೇಳಿದರು.ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ದೀನದಲಿತರ, ಬಡವರ, ಅಲ್ಪ ಸಂಖ್ಯಾತರ, ಹಿಂದುಳಿದ ವರ್ಗದವರ ಪರವಾಗಿರುವ ಮುಖ್ಯ ಮಂತ್ರಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿ ಹೆಚ್.ಡಿ ತಮ್ಮಯ್ಯನವರಿಗೆ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಜಯಗಳಿಸುವಂತೆ ಮಾಡಬೇಕೆಂದು ವಿನಂತಿಸಿದರು.ನಮ್ಮ ಕುಟುಂಬದ ಸದಸ್ಯರಾಗಿರುವ ಸರಳ ಸಜ್ಜನ ವ್ಯಕ್ತಿತ್ವದ ಹೆಚ್.ಡಿ ತಮ್ಮಯ್ಯನವರಿಗೆ ಉಪ್ಪಳ್ಳಿ ವಾರ್ಡ್ನಲ್ಲಿ 1500ಕ್ಕೂ ಹೆಚ್ಚು ಮತಗಳ ಲೀಡ್ ಪಡೆದುಕೊಳ್ಳುತ್ತಾರೆಂಬ ದೃಢ ವಿಶ್ವಾಸವಿದೆ, ಕಾಂಗ್ರೆಸ್ ಪಕ್ಷದ ಚಿಹ್ನೆ ಹಸ್ತಕ್ಕೆ ಮತ ನೀಡುವುದರ ಮೂಲಕ ಬಿಜೆಪಿ ಅಭ್ಯರ್ಥಿಗೆ ರಾಜಕೀಯ ವಿರಾಮ ಕೊಡೋಣ ಎಂದು ತಿಳಿಸಿದರು.

ಅಭ್ಯರ್ಥಿ ಹೆಚ್.ಡಿ ತಮ್ಮಯ್ಯ ಮಾತನಾಡಿ ನಾನೊಬ್ಬ ಜಾತ್ಯಾತೀತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದು ಬಡ ರೈತ ಕುಟುಂಬದಿAದ ರಾಜಕಾರಣಕ್ಕೆ ಬಂದಿದ್ದು ಶೋಷಿತ ವರ್ಗ ಬಡವರ ಬದುಕಿನ ಬಗ್ಗೆ ಹೋರಾಟ ಮಾಡುವ ವ್ಯಕ್ತಿಯಾಗಿದ್ದೇನೆ ಭಾವನೆಗಳನ್ನು ಕೆರಳಿಸಿ ಹೋರಾಟ ಮಾಡುವ ಅಗತ್ಯ ಇಲ್ಲ ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಮತ ನೀಡಬೇಕೆಂದು ಮನವಿ ಮಾಡಿದರು.ನಗರದ ಗವನಹಳ್ಳಿ, ಉಪ್ಪಳ್ಳಿ, ಇಂದಿರಾಗಾAಧಿ ಬಡಾವಣೆ, ಶಾಂತಿ ನಗರದಲ್ಲಿ ಅಭೂತಪೂರ್ವ ಜನ ಬೆಂಬಲ ಉತ್ಸಾಹದಿಂದ ನೀಡುತ್ತಿರುವುದು ನೋಡಿದರೆ 2004ರ ಚುನಾವಣಾ ಇತಿಹಾಸ ಮರುಕಳಿಸಲಿದೆ ಕ್ಷೇತ್ರದ ಮತದಾರರು ಚುನಾವಣೆ ದಿನಾಂಕಕ್ಕಾಗಿ ತುದಿ ಕಾಲಿನಲ್ಲಿ ಕಾಯುತ್ತಿದ್ದಾರೆ. ಸೋಲಿನ ಭೀತಿಯಿಂದ ಶಾಸಕರು ಹತಾಶರಾಗಿದ್ದಾರೆ ಎಂದು ಟೀಕಿಸಿದರು.ಕಾಂಗ್ರೆಸ್ ಪಕ್ಷಕ್ಕೆ ಅಭಾರಿಯಾಗಿದ್ದೇನೆ, ಪಕ್ಷದ ಕಾರ್ಯಕರ್ತರು ಇಷ್ಟೊಂದು ಬೃಹತ್ ಆಗಿ ಭಾಗವಹಿಸುತ್ತಿರುವುದರಿಂದ 20 ವರ್ಷದ ನಂತರ ಕ್ಷೇತ್ರದಲ್ಲಿ ವಿಜಯ ಪತಾಕೆಯ ಕಾಂಗ್ರೆಸ್ ಬಾವುಟ ಹಾರಿಸುವ ಮೂಲಕ ಇತಿಹಾಸ ಸೃಷ್ಠಿಸುತ್ತೇವೆ ಎಂದು ದೃಢ ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ನಗರಸಭಾ ಸದಸ್ಯೆ ಸುರೇಖಾಸಂಪತ್‌ರಾಜ್ ಮಾತನಾಡಿ ಬಿಜೆಪಿಯ ಸರ್ಕಾರದಲ್ಲಿ ಆಡಳಿತ ನಡೆಸಿದ ಶಾಸಕರು ಕಲ್ಲುದೊಡ್ಡಿ ಗ್ರಾಮಸ್ಥರಿಗೆ ಈವರೆಗೂ ಹಕ್ಕು ಪತ್ರ ನೀಡಿಲ್ಲ ಚುನಾವಣೆ ಸಂದರ್ಭದಲ್ಲಿ ಕದ್ದುಮುಚ್ಚಿ ಪತ್ರಕೊಡುವ ಬದಲು ನಿವೇಶನದ ಇ-ಖಾತೆ ಮಾಡಿಕೊಡಲಿ ಎಂದು ಸವಾಲೆಸೆದರು.ಜನ ಇಂದು ಸ್ವ ಇಚ್ಚೆಯಿಂದ ಬದಲಾವಣೆಯನ್ನು ಬಯಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಲು ತೀರ್ಮಾನಿಸಿದ್ದಾರೆ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಧ್ವಜ ಹಾರುತ್ತದೆ. ಬಿಜೆಪಿಯ ಶಾಸಕ ಸಿ.ಟಿ ರವಿಯವರಿಗೆ ಈ ಚುನಾವಣೆಯಲ್ಲಿ ಮತ ಕೇಳುವ ಯಾವುದೇ ನೈತಿಕತೆ ಇಲ್ಲ ಎಂದು ಟೀಕಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ 40 ಪರ್ಸೆಂಟ್ ಸರ್ಕಾರವನ್ನು ಕಿತ್ತೊಗೆಯಬೇಕು ಅಭಿವೃದ್ದಿ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕಾದರೆ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ನವರಿಗೆ ಅತ್ಯಧಿಕ ಮತಗಳನ್ನು ನೀಡುವಂತೆ ವಿನಂತಿಸಿದರು.
ಜಿಲ್ಲೆಯ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾಗಿ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ಪಕ್ಷದ ಮುಖಂಡರುಗಳು ಭಾಗವಹಿಸುವ ಪ್ರಚಾರ ಸಭೆಯಲ್ಲಿ ಸ್ವ ಇಚ್ಚೆಯಿಂದ ಭಾಗವಹಿಸುತ್ತಿರುವುದನ್ನು ನೋಡಿದರೆ ಕಾಂಗ್ರೆಸ್‌ಗೆ ಮತ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ಮುಂದಿನ ಪ್ರಚಾರ ಸಭೆಗಳಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತಿತರ ಮುಖಂಡರು ಭಾಗವಹಿಸಿ ಮತಯಾಚನೆ ಮಾಡಲಿದ್ದಾರೆ ಎಂದರು.
ಮತ ಯಾಚನೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ ತಮ್ಮಯ್ಯಗೆ ಮತದಾರರೆ ಸ್ವ ಇಚ್ಚೆಯಿಂದ ದೇಣಿಗೆ ಸಂಗ್ರಹಿಸಿ ನೀಡುತ್ತಿದ್ದ ದೃಶ್ಯ ಕಂಡುಬAತು.
ಚುನಾವಣಾ ಪ್ರಚಾರ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ ನಯಾಜ್ ಅಹಮದ್, ಕಾಂಗ್ರೆಸ್ ಮುಖಂಡ ಕೆ.ಮಹಮ್ಮದ್, ನಗರಸಭಾ ಸದಸ್ಯ ಶಾದಬ್ ಅಲ್ಲಂಖಾನ್, ಖಲಂದರ್, ಮುನೀರ್ ಅಹಮದ್ ಮತ್ತಿತರರು ಭಾಗವಹಿಸಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!