May 19, 2024

MALNAD TV

HEART OF COFFEE CITY

ನಗರಸಭೆ ಚುನಾವಣೆ; ಜೆಡಿಎಸ್ ಪ್ರಚಾರಕ್ಕೆ ಚಾಲನೆ

1 min read

ಚಿಕ್ಕಮಗಳೂರು: ನಗರಸಭೆಗೆ ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ನಗರದ ಎಲ್ಲಾ ವಾರ್ಡ್‍ಗಳಲ್ಲಿಸ್ಪರ್ಧಿಸಲು ಜೆಡಿಎಸ್ ಪಕ್ಷದ ಹುರಿಯಾಳುಗಳು ಹಣಿಗೊಳ್ಳುತ್ತಿದ್ದಾರೆಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ತಿಳಿಸಿದರು.ನಗರದ ಎಂ.ಜಿ.ರಸ್ತೆ ಗಣಪತಿ ದೇವಾಲಯದಲ್ಲಿ ಸೋಮವಾರ ಪಕ್ಷದ ಕಾರ್ಯಕರ್ತರ ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ

ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಹಿತ ದೃಷ್ಟಿಯಿಂದ ಜನಪ್ರತಿನಿಧಿಗಳ ಆಯ್ಕೆ ಮೂಲಕ ಸುಲಲಿತ ಆಡಳಿತ ನಡೆಯಬೇಕು ಎನ್ನುವ ಉದ್ದೇಶದಿಂದ ನಗರಸಭೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಯಂತಹ ಸ್ಥಳೀಯ ಸಂಸ್ಥೆಗಳು ರಚನೆಗೊಂಡಿವೆ. ಆದರೆ ಚಿಕ್ಕಮಗಳೂರು ನಗರಸಭೆಗೆ ಕಳೆದ 4 ವರ್ಷಗಳಿಂದ ಚುನಾವಣೆ ನಡೆಸದೆ ಮುಂದೂಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತೋರಿದಂತೆ ಎಂದು ವಿಷಾಧ ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಆಯ್ಕೆ ಇಲ್ಲದೇ ಹೋದಲ್ಲಿ ಜನಸಾಮಾನ್ಯರು ಹಲವಾರು ಸಮಸ್ಯೆಗಳನ್ನು

ಎದುರಿಸಲಿದ್ದಾರೆ. ಜನರ ಅಧಿಕಾರವನ್ನು ಜನತೆಗೆ ವಹಿಸಬೇಕು ಎಂಬ ತೀರ್ಮಾನದೊಂದಿಗೆ ನ್ಯಾಯಾಲಯ ಮಧ್ಯಪ್ರವೇಶಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ತಾಕೀತು ಮಾಡುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ, ಆಡಳಿತ ಸಮಸ್ಯೆಯನ್ನು ಮನಗಂಡು ಕೋರ್ಟ್ ಇದೀಗ ಚುನಾವಣೆ ನಡೆಸುವಂತೆ ಆದೇಶ ನೀಡಿರುವುದುಸ್ವಾಗತಾರ್ಹ ವಿಚಾರ ಎಂದರು. ಚುನಾವಣಾ ಆಯೋಗ ಈಗಾಗಲೇ ನಗರಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು ನಗರದ ಎಲ್ಲಾ ವಾರ್ಡ್‍ಗಳಲ್ಲಿ ಜೆಡಿಎಸ್ಸ್ಪರ್ಧಾ ಹುರಿಯಾಳುಗಳು ಕಣಕ್ಕಿಳಿಯದ್ದಾರೆ. ಪಕ್ಷದ ಅಭ್ಯರ್ಥಿಗಳ

 

 

ಗೆಲುವಿಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಅದಕ್ಕಾಗಿಪಕ್ಷದ ಕಾರ್ಯಕರ್ತರು ಮತದಾರರ ಮನವೊಲಿಸುವ ಕಾರ್ಯಕ್ಕೆಮುಂದಾಗಿದ್ದಾರೆ ವಿಶೇಷವಾಗಿ ಚುನಾವಣೆ ವೇಳೆ ಯಾವುದೇ ನಿರ್ವಿಜ್ಞಗಳು ಬಾರದಿರಲಿ ಸುಲಲಿತವಾಗಿ ಚುನಾವಣೆ ನಡೆದು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಎನ್ನುವ ಸುದುದ್ದೇಶದಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಇತ್ತೀಚಿಗೆ ಹಲವು ಜೆಡಿಎಸ್ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು ರಾಜ್ಯ ರಾಜಕಾರಣದಲ್ಲಿ ಈಹಿಂದಿನಿಂದಲೂ ಅನೇಕ ಮುಖಂಡರು ಪಕ್ಷವನ್ನುತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅದಾದ ಬಳಿಕ ಪುನಃ ಪಕ್ಷ ಸೇರ್ಪಡೆಗೊಂಡಿದ್ದಾರೆ. ಆದರೆ ಪಕ್ಷದಲ್ಲಿಕಾರ್ಯಕರ್ತರ ಬಲ ಇರುವವರೆಗೂ ಯಾವುದೇ ಮುಖಂಡರು ಪಕ್ಷ ತೊರೆದರೂ ಯಾವುದೇ ಹಾನಿಯಿಲ್ಲ ಎಂದು ಸಮರ್ಥನೆ ಮಾಡಿಕೊಂಡರು

 

ಈ ಸಂದರ್ಭದಲ್ಲಿ ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಮಂಜಪ್ಪ, ಜೆಡಿಎಸ್ ಮುಖಂಡ ತಿಮ್ಮಶೆಟ್ಟಿ, ನಗರಾಧ್ಯಕ್ಷ ಎ.ಸಿ.ಕುಮಾರ್, ಪ್ರಧಾನ ಕಾರ್ಯದರ್ಶಿ ಮೂರ್ತಿ, ಮಾಜಿ ನಗರಸಭಾ ಸದಸ್ಯ ದಿನೇಶ್,ಮುಖಂಡರಾದ ಇರ್ಷಾದ್, ಆನಂದೇಗೌಡ, ಗೋಪಿ, ವೆಂಕಟೇಶ್, ದೇವರಾಜ್ ಅರಸ್, ಮಂಜಣ್ಣ, ಚಿದಾನಂದ ಮತ್ತಿತರರು ಹಾಜರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!