May 14, 2024

MALNAD TV

HEART OF COFFEE CITY

ಹಣಕಾಸಿನ ವಿಚಾರಕ್ಕೆ ಸ್ನೇಹಿತರಿಂದಲೇ ಸ್ನೇಹಿತನ ಕೊಲೆ

1 min read

ಚಿಕ್ಕಮಗಳೂರು : ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಗೆಳೆಯನನ್ನ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಮೃತನನ್ನ 30 ವರ್ಷದ ಓಂಕಾರ ಎಂದು ಗುರುತಿಸಲಾಗಿದೆ. ಕೊಲೆ ಸಂಬಂಧ ಧನರಾಜ್, ವಿಜಯ್ ಹಾಗೂ ಸುನಿಲ್ ಎಂಬ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ ಓಂಕಾರನನ್ನು ಸ್ನೇಹಿತರೆ ಕರೆದುಕೊಂಡು ಬಂದಿದ್ದರು. ಎಪಿಎಂಸಿ ಯಾರ್ಡ್ ನಲ್ಲಿ ಮಾತುಕತೆ ಮಾಡುವ ವೇಳೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಆರೋಪಿಗಳು ಹಾಗೂ ಕೊಲೆಯಾದ ಓಂಕಾರ ಎಲ್ಲರೂ ಸ್ನೇಹಿತರಾಗಿದ್ದು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!